ಲೈಂಗಿಕ ಕಿರುಕುಳ ಆರೋಪ: ಮುರುಘಾ ಶ್ರೀ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಲೈಂಗಿಕ ಕಿರುಕುಳ ಆರೋಪದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗ ಮಠದ ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿಯನ್ನು ನ.25 ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಚಿತ್ರದುರ್ಗದ 2 ನೇ ಹೆಚ್ಚುವರಿ ಕೋರ್ಟ್ ಗೆ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಮುರುಘಾ ಶ್ರೀಯನ್ನು ವಿಚಾರಣೆಗೆ ಹಾಜರುಪಡಿಸಲಾಗಿತ್ತು.ಈ ವೇಳೆ ಪ್ರಕರಣದ ಎ.1 ಆರೋಪಿಯಾಗಿರುವ ಮುರುಘಾ ಶ್ರೀ ನ್ಯಾಯಾಂಗ ಬಂಧನದ ಅವಧಿಯನ್ನುವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇನ್ನುಳಿದ ಆರೋಪಿಗಳಾಗಿರುವ ವಾರ್ಡನ್ ರಶ್ಮಿ,ಹಾಗೂ ಪರಮಶಿವಯ್ಯಗೆ ಕೂಡ ನ.25 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!