ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯರಿಂದ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಕೇರಳ ಪಾಲಕ್ಕಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್ ಕೂಟತಿಲ್ ವಿರುದ್ಧ ಪಕ್ಷ ಕಠಿಣ ನಿಲುವು ತೆಗೆದುಕೊಂಡಿದೆ. ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.
ಆರು ತಿಂಗಳ ಕಾಲ ಅಮಾನತು ಮಾಡಲಾಗಿದ್ದು, ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪಕ್ಷ ಕೇಳಿಲ್ಲ. ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಹುಲ್, ಶಾಸಕ ಹುದ್ದೆಯನ್ನು ತ್ಯಜಿಸುವ ಬಗ್ಗೆ ಚರ್ಚೆಗಳ ನಡುವೆ ಪಕ್ಷದ ಕ್ರಮ ಕೈಗೊಳ್ಳಲಾಗಿದೆ.
ರಾಹುಲ್ ಮಮ್ ಕೂಟತಿಲ್ ಪಕ್ಷದ ಅಥವಾ ಸಂಸದೀಯ ಪಕ್ಷದ ಸಭೆಯಲ್ಲಿ ಸದಸ್ಯರಾಗಿರುವುದಿಲ್ಲ. ತಕ್ಷಣಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಉಪಚುನಾವಣೆ ನಡೆಯಲಿದೆ ಎಂಬುವುದು ಪಕ್ಷದ ನಿಲುವು ಎಂದು ಸೂಚಿಸಲಾಗಿದೆ.