ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರ್ಗಮಿತ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಕೇಸ್ ಅನ್ನು ದೆಹಲಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್(ಸಿಎಂಎಂ) ಗುರುವಾರ ಸಿಟಿ ಕೋರ್ಟ್ ಗೆ ವರ್ಗಾಯಿಸಿದೆ.
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಪ್ರಕರಣವನ್ನು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್(ಎಸಿಎಂಎಂ) ಹರ್ಜೀತ್ ಸಿಂಗ್ ಜಸ್ಪಾಲ್ ಅವರಿಗೆ ವಹಿಸಿದ್ದಾರೆ.ಹರ್ಜೀತ್ ಸಿಂಗ್ ಜಸ್ಪಾಲ್ ಅವರು ಸಂಸದರು ಮತ್ತು ಶಾಸಕರ ಪ್ರಕರಣಗಳನ್ನು ಮಾತ್ರ ವಿಚಾರಣೆ ನಡೆಸುತ್ತಾರೆ. ಪ್ರಕರಣದ ವಿಚಾರಣೆಯನ್ನು ಈಗ ಜೂನ್ 27ಕ್ಕೆ ಪಟ್ಟಿ ಮಾಡಲಾಗಿದೆ.