ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದ ಟಿಕ್ರಿ ಗಡಿಯಲ್ಲಿ ಮಹಿಳಾ ಕಾರ್ಯಕರ್ತೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ತನಿಖೆ ನಡೆಸುವುದಾಗಿ ಹರಿಯಾಣದ ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.
ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಪಶ್ಚಿಮ ಬಂಗಾಳದ ಮಹಿಳಾ ಹೋರಾಟಗಾರ್ತಿಯೊಬ್ಬರ ಮೇಲೆ ಟಿಕ್ರಿ ಗಡಿಯಲ್ಲಿ ಕೆಲವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು.
ಒಂದು ವಾರದ ನಂತರ ಮಹಿಳೆಗೆ ಜ್ವರ ಬಂದಿದ್ದು, ಕೋವಿಡ್ ವರದಿ ಪಾಸಿಟಿವ್ ಬಂದಿತ್ತು. ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಏಪ್ರಿಲ್ 30 ರಂದು ಅವರು ವೈರಸ್ಗೆ ಬಲಿಯಾಗಿದ್ದರು.
ಮಹಿಳೆ ಸಾಯುವ ಹಿಂದಿನ ದಿನ ಅವರ ತಂದೆ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ, ಮಹಿಳೆ ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದ್ದನ್ನು ಅಪ್ಪನ ಹೇಳಿಕೊಂಡಿದ್ದರು.
ಮೇ 8ರಂದು ಸಂತ್ರಸ್ತೆಯ ತಂದೆ ಇಬ್ಬರು ವ್ಯಕ್ತಿಗಳ ವಿರುದ್ಧ ಘಟನೆ ಸಂಬಂಧ ಎಫ್ಐಆರ್ ದಾಖಲಿಸಿದ್ದು, ಹರಿಯಾಣ ಪೊಲೀಸರು ತನಿಖೆ ಕೈಗೊಂಡಿದ್ದಾರೆ.