Friday, March 1, 2024

ಶಾಲಾ ಪ್ರಭಾರ ಮುಖ್ಯ ಶಿಕ್ಷಕನಿಂದಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪೋಷಕರಿಂದ ಪೊಲೀಸರಿಗೆ ದೂರು

ಹೊಸ ದಿಗಂತ ವರದಿ, ನಂಜನಗೂಡು:

ತಾಲೂಕಿನ ದಾಸನೂರು ಪ್ರಾಥಮಿಕ ಶಾಲೆಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕನಿಂದಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು. ಶಿಕ್ಷಕನ ವಿರುದ್ದ ಕ್ರಮ ಕೈಗೊಳ್ಳುವಂತೆ ಪೋಷಕರು ಪೊಲೀಸ್‌ಠಾಣೆಗೆ ದೂರು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ದಾಸನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಭಾರ ಮುಖ್ಯ ಶಿಕ್ಷಕ ಪಿ.ಪ್ರಕಾಶ್ ಎಂಬಾತ ವಿದ್ಯಾರ್ಥಿನಿಯರ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂದು ಶಾಲಾ ವಿದ್ಯಾರ್ಥಿನಿಯರು ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ಶಾಲೆಗೆ ಭೇಟಿ ನೀಡಿದಾಗ ಶಿಕ್ಷಕ ಪಿ.ಪ್ರಕಾಶ್ ಶಾಲೆಯಿಂದ ನಾಪತ್ತೆಯಾಗಿದ್ದಾನೆ.

ಈ ಕೂಡಲೇ ಕಾಮುಕ ಶಿಕ್ಷಕನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ವಿದ್ಯಾರ್ಥಿಗಳ ಪೋಷಕರು ಕವಲಂದೆ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೊತೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಸಹ ಕಾಮುಕ ಶಿಕ್ಷಕನನ್ನು ಕೆಲಸದಿಂದ ವಜಾಗೊಳಿಸುವಂತೆ ದೂರು ನೀಡಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ಎ.ಟಿ.ಶಿವಲಿಂಗಯ್ಯ ಮಾತನಾಡಿ, ವಿಷ ತಿಳಿದ ಬಳಿಕ ಶಾಲೆಗೆ ಭೇಟಿ ನೀಡಿ ಶಾಲಾ ಅಭಿವೃದ್ದಿ ಸಮಿತಿಯ ಸದಸ್ಯರ ಸಭೆ ನಡೆಸಿ, ಇತರೆ ಶಿಕ್ಷಕರ ಬಳಿ ಮತ್ತು ಪೋಷಕರ ಬಳಿ ಮಾಹಿತಿ ಕಲೆಹಾಕಿದ್ದೇನೆ. ಶಿಕ್ಷಕನ ವಿರುದ್ದ ಕ್ರಮವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ವರದಿ ನೀಡುತ್ತೇನೆ ಎಂದು ತಿಳಿಸಿದರು.
ಈ ಸಂಬoಧ ಕೌಲಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!