ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಶ್ರಮದಲ್ಲಿ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ಪೊಲೀಸರು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಿದ್ದಾರೆ.
ಆರೋಪಿಯು ಈ ಪ್ರಕರಣ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿದ್ದರು. ಇವರ ವಿರುದ್ಧ 2009 ಮತ್ತು 2016 ರಲ್ಲಿ ಸಹ ಎರಡು ಲೈಂಗಿಕ ಕಿರುಕುಳದ ದೂರು ದಾಖಲಾಗಿದ್ದವು. ಸ್ವಾಮೀಜಿ, ವಿದ್ಯಾರ್ಥಿಗಳನ್ನು ತಮ್ಮ ಕೋಣೆಗೆ ಕರೆಸಿಕೊಂಡು ಉಚಿತ ವಿದೇಶ ಪ್ರವಾಸಗಳ ಆಮಿಷ ಒಡ್ಡಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದರು. ಮಹಿಳಾ ಹಾಸ್ಟೆಲ್‌ನಲ್ಲಿ ರಹಸ್ಯವಾಗಿ ಕ್ಯಾಮೆರಾಗಳನ್ನು ಅಳವಡಿಸಿದ್ದರು ಎಂದು ಆರೋಪಿಸಲಾಗಿದೆ.
ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು, 32 ವಿದ್ಯಾರ್ಥಿನಿಯರ ಹೇಳಿಕೆಗಳನ್ನು ದಾಖಲಿಸಿದ್ದಾರೆ.