ಮುರ್ಶಿದಾಬಾದ್‌ ಹಿಂಸಾಚಾರದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ? NCW ನಿಯೋಗ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಹತ್ಕರ್ ನೇತೃತ್ವದ ನಿಯೋಗವು ಮುರ್ಶಿದಾಬಾದ್‌ನ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ.

ಮುರ್ಶಿದಾಬಾದ್‌ನಲ್ಲಿ ನಡೆದ ಹಿಂಸಾಚಾರದ ವೇಳೆ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು ಈ ಹಿನ್ನಲೆಯಲ್ಲಿ ನಿಯೋಗವು ಸಂತ್ರಸ್ತ ಮಹಿಳೆಯರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.

ಕೆಲವು ಮಹಿಳೆಯರು ತಮ್ಮ ಗಂಡನನ್ನು ಕಳೆದುಕೊಂಡಿದ್ದಾರೆ, ಮತ್ತೆ ಕೆಲವರು ಮಗನನ್ನು ಕಳೆದುಕೊಂಡಿದ್ದಾರೆ. ಹಿಂಸಾಚಾರದ ವೇಳೆ ಜನರನ್ನು ಮನೆಗಳಿಂದ ಹೊರಗೆಳೆದು ಕೊಂದಿದ್ದಾರೆ. ಇದು ನಿಜಕ್ಕೂ ಭಯಾನಕವಾಗಿದೆ. ಪಶ್ಚಿಮ ಬಂಗಾಳದಲ್ಲಿ ಇಂತಹ ಘಟನೆಗಳು ಈ ಹಿಂದೆ ನಡೆದಿವೆಯೇ? ನನಗೆ ಗೊತ್ತಿಲ್ಲ. ಇಂತಹದ್ದನ್ನೆಲ್ಲಾ ಮೊದಲ ಬಾರಿಗೆ ನೋಡಿದ್ದೇವೆ. ಇದು ಸ್ವೀಕಾರಾರ್ಹವಲ್ಲ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು NCW ಸದಸ್ಯೆ ಅರ್ಚನಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!