ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಭಾರತ ಕುಸ್ತಿ ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ಅವರಿಗೆ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವುದರಿಂದ ದೆಹಲಿ ಕೋರ್ಟ್ ವಿನಾಯಿತಿ ನೀಡಿದೆ.
ಈ ಸಂಬಂಧ, ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರಿಗೆ ಬ್ರಿಜ್‌ಭೂಷಣ್ ಸಿಂಗ್ ಪರ ವಕೀಲ ಅರ್ಜಿ ಸಲ್ಲಿಸಿದರು. ‘ಸಂಸತ್ ಸದಸ್ಯರಾಗಿ ತಮ್ಮ ಜವಾಬ್ದಾರಿ ನಿರ್ವಹಣೆಯಲ್ಲಿ ನಿರತರಾಗಿರುವ ಕಾರಣ ಖುದ್ದು ಹಾಜರಾತಿಯಿಂದ ಬ್ರಿಜ್‌ಭೂಷಣ್ ಸಿಂಗ್ ಅವರಿಗೆ ವಿನಾಯಿತಿ ನೀಡಬೇಕು’ ಎಂದು ಕೋರಿದರು.
ಈ ದಿನದ ಮಟ್ಟಿಗೆ ವಿನಾಯಿತಿ ನೀಡಲಾಗಿದೆ’ ಎಂದು ಹೇಳಿದ ನ್ಯಾಯಾಧೀಶ ಜಸ್ಪಾಲ್, ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿದರು.