ಸುಪ್ರೀಂಕೋರ್ಟ್ ನಿಂದ ಮಹಿಳಾ ಕುಸ್ತಿಪಟುಗಳು ಸಲ್ಲಿಸಿದ ಲೈಂಗಿಕ ಕಿರುಕುಳ ಆರೋಪ ಅರ್ಜಿ ವಿಚಾರಣೆ ಮುಕ್ತಾಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ (Wrestling Federation) ಮುಖ್ಯಸ್ಥನ ಮೇಲೆ ಲೈಂಗಿಕ ಕಿರುಕುಳ (Sexual Harassment) ಆರೋಪ ಮಾಡಿದ್ದ ಮಹಿಳಾ ಕುಸ್ತಿಪಟುಗಳ(Wrestlers ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಇಂದು ಇತ್ಯರ್ಥ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (Chief Justice DY Chandrachud) ನೇತೃತ್ವದ ಪೀಠವು ಕುಸ್ತಿಪಟುಗಳನ್ನು ಪ್ರತಿನಿಧಿಸುವ ವಕೀಲರ ಮೌಖಿಕ ಮನವಿಯನ್ನು ಸ್ವೀಕರಿಸಲು ನಿರಾಕರಿಸಿದೆ.

ಫೆಡರೇಶನ್ ಮುಖ್ಯಸ್ಥನವಿರುದ್ಧ ಎಫ್‍ಐಆರ್ (FIR) ದಾಖಲಿಸಬೇಕು ಮತ್ತು ದೂರುದಾರರಿಗೆ ಭದ್ರತೆಗಾಗಿ ನೀಡಬೇಕೆಂದು ಕೋರಿ ಮನವಿ ಸಲ್ಲಿಸಿದ್ದೀರಿ. ನಿಮ್ಮ ಎರಡೂ ಮನವಿಯನ್ನು ಈಡೇರಿಸಲಾಗಿದೆ. ಯಾವುದೇ ಹೆಚ್ಚಿನ ಕುಂದುಕೊರತೆಗಳಿದ್ದರೆ ನೀವು ಹೈಕೋರ್ಟ್ ಅಥವಾ ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಅನ್ನು ಸಂಪರ್ಕಿಸಬಹುದು ಎಂದು ಪೀಠವು ಆದೇಶಿಸಿ ಅರ್ಜಿಯನ್ನು ವಿಲೇವಾರಿ ಮಾಡಿದೆ.
ಹೆಚ್ಚಿನ ಪರಿಹಾರಕ್ಕಾಗಿ ಹೈಕೋರ್ಟ್ ಅಥವಾ ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್‌ಗೆ ತೆರಳಲು ಅರ್ಜಿದಾರರಿಗೆ ಇದು ಅವಕಾಶ ನೀಡಿದೆ.

ದೆಹಲಿ ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಏಪ್ರಿಲ್ 28 ರ ಉನ್ನತ ನ್ಯಾಯಾಲಯದ ಆದೇಶದ ಪ್ರಕಾರ, ದೂರುದಾರರಿಗೆ ಬೆದರಿಕೆ ಗ್ರಹಿಕೆಯ ಮೌಲ್ಯಮಾಪನವನ್ನು ಪೊಲೀಸರು ನಡೆಸಿದ್ದರು. ಅಪ್ರಾಪ್ತ ದೂರುದಾರರಿಗೆ ಹಾಗೂ ಇತರ ಆರು ಮಹಿಳಾ ಕುಸ್ತಿಪಟುಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಬಿಜೆಪಿ ಸಂಸದರ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದು ದೆಹಲಿ ಪೊಲೀಸರು ಭೂಷಣ್ ಶರಣ್ ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ಪ್ರತಿಭಟನಾ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!