February 24, 2026
Tuesday, February 24, 2026
spot_img

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಶಿಕ್ಷಕ ಅರೆಸ್ಟ್!

ಹೊಸದಿಗಂತ ಚಿತ್ರದುರ್ಗ:

ವಿದ್ಯಾಬುದ್ಧಿ ಕಲಿಸಿ ಉತ್ತಮ ದಾರಿಯಲ್ಲಿ ನಡೆಸಬೇಕಾದ ಶಿಕ್ಷಕನೇ ಕಾಮದ ಮೃಗವಾಗಿ ವರ್ತಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಆರು ಮಂದಿ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಶಿಕ್ಷಕ ರಂಗಣ್ಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹೋಬಳಿ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ರಂಗಣ್ಣ, ಕಳೆದ ಒಂದು ವರ್ಷದಿಂದ ಶಾಲೆಯ ಆರು ಮಂದಿ ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಶಿಕ್ಷಕನ ಅತಿರೇಕದ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿನಿಯರು ಧೈರ್ಯ ಮಾಡಿ ಶಾಲೆಯ ಮುಖ್ಯ ಶಿಕ್ಷಕರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯ ಶಿಕ್ಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ವಿದ್ಯಾರ್ಥಿನಿಯರ ದೂರಿನ ಮೇರೆಗೆ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಪ್ರಕರಣ ದಾಖಲಾಗುತ್ತಿದ್ದಂತೆ ಶಿಕ್ಷಕ ರಂಗಣ್ಣ ತಲೆಮರೆಸಿಕೊಂಡಿದ್ದ. ಪ್ರಕರಣದ ಗಂಭೀರತೆಯನ್ನು ಅರಿತ ಪೊಲೀಸರು ತೀವ್ರ ಹುಡುಕಾಟ ನಡೆಸಿ, ಘಟನೆ ನಡೆದ ಕೇವಲ 24 ಗಂಟೆಯೊಳಗೆ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !