ಮತ್ತೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಬಿಡುಗಡೆ ಬೆನ್ನಲ್ಲೇ ಮಧುಗಿರಿ ಡಿವೈಎಸ್ಪಿ ಮತ್ತೆ ಬಂಧನ

ಹೊಸದಿಗಂತ ತುಮಕೂರು :

ದೂರು ನೀಡಲು ಬಂದಿದ್ದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಆರೋಪದಲ್ಲಿ ಜೈಲು ಸೇರಿದ್ದ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಬಂಧನಕ್ಕೊಳಪಟ್ಟಿರುವ ಘಟನೆ ನಡೆದಿದೆ.

ದೂರು ನೀಡಲು ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಜೈಲು ಸೇರಿದ್ದ ಡಿವೈಎಸ್‌ಪಿ ಎ.ರಾಮಚಂದ್ರಪ್ಪಗೆ ಸೆಷನ್ಸ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆದರೆ, ಮತ್ತೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮತ್ತೆ ಡಿವೈಎಸ್‌ಪಿಯನ್ನು ಮಧುಗಿರಿ ಪೊಲೀಸರು ಬಂಧಿಸಿ ತುಮಕೂರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ಅವರನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದೂರು ನೀಡಲು ಡಿವೈಎಸ್‌ಪಿ ಕಚೇರಿಗೆ ಬಂದಿದ್ದ ಮಹಿಳೆಯ ಮೇಲೆ ಕಚೇರಿಯಲ್ಲಿಯೇ ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಪೊಲೀಸರು ಬಂಧಿಸಿದ್ದರು.

ಈ ಪ್ರಕರಣದಲ್ಲಿ ನ್ಯಾಯಾಧೀಶ ಕೆ.ಯಾದವ್ ಅವರು ಡಿವೈಎಸ್‌ಪಿ ಎ.ರಾಮಚಂದ್ರಪ್ಪಗೆ 2 ಲಕ್ಷ ಮೌಲ್ಯದ ಬಾಂಡ್, ಇಬ್ಬರ ಜಾಮೀನು ಮತ್ತಿತರೆ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದ್ದರು. ಎಲ್ಲ ಷರತ್ತುಗಳೊಂದಿಗೆ ಬಿಡುಗಡೆಯಾದ ತಕ್ಷಣವೇ ಮಧುಗಿರಿ ಪೊಲೀಸರು ಮತ್ತೊಂದು ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಬಂಧಿಸಿದರು. ಡಿವೈಎಸ್‌ಪಿಯನ್ನು ಮಧುಗಿರಿ ಕಾರಾಗೃಹದಲ್ಲಿಡಲಾಗಿದೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!