ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಮುಕನೊಬ್ಬ ಅತ್ಯಾಚಾರ ಎಸಗಿ 6 ವರ್ಷದ ಮಗು ಹತ್ಯೆ ಮಾಡಿದ್ದಾನೆ. ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ.
ನಿನ್ನೆ ಸಂಜೆ 7:30ಕ್ಕೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿಯ ಪೋಷಕರು ಗಾರೆ ಕೆಲಸ ಮಾಡಿಕೊಂಡಿದ್ದಾರೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ ಈ ಕೃತ್ಯ ಎಸಗಿದ್ದಾನೆ.
ಆಕೆಯ ಪೋಷಕರು ಇಲ್ಲದಿದ್ದಾಗ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಕರೆದೊಯ್ದಿದ್ದಾನೆ. ಈ ಕೃತ್ಯದಲ್ಲಿ ಮಗು ಸಾವನ್ನಪ್ಪಿದ್ದು, ಸ್ಥಳೀಯರು ಕಾಮುಕನನ್ನು ಹಿಡಿದು ಥಳಿಸಿದ್ದಾರೆ ಎನ್ನಲಾಗಿದೆ. ರಾಮೂರ್ತಿನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.