October 16, 2026
Friday, October 16, 2026
spot_img

ರಾಜ್ಯದಲ್ಲಿ ಬರಗಾಲದ ನೆರಳು, ಸಿಎಂ-ಡಿಸಿಎಂಗೆ ಕುರ್ಚಿ ತೆವಲು : ಆರ್‌. ಅಶೋಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಬಿಸಿಲು ಅತಿಯಾಗಿದೆ. ಜನರಿಗೆ ಕುಡಿಯೋದಕ್ಕೆ ನೀರು ಸಿಕ್ತಿಲ್ಲ. ಬರಗಾಲದಂತಹ ಪರಿಸ್ಥಿತಿಯಲ್ಲಿ ಜನ ಬೇಯುತ್ತಿದ್ದಾರೆ. ಆದರೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಕುರ್ಚಿಯದ್ದೇ ತೆವಲು ಹತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ದೆಹಲಿಯಲ್ಲಿ ಕುರ್ಚಿ ಉಳಿಸಿಕೊಳ್ಳುವ ರಾಜಕೀಯ ಮೇಲಾಟಕ್ಕಿಂತ ರಾಜ್ಯದ ಜನರ ಹಿತ ಕಾಯುವುದು ಮುಖ್ಯಮಂತ್ರಿಗಳ ಪ್ರಥಮ ಆದ್ಯತೆಯಾಗಲಿ. ಸರ್ಕಾರ ಕೂಡಲೇ ‘ಬರ ನಿರ್ವಹಣಾ ಸಮಿತಿ’ಯನ್ನು ಸಕ್ರಿಯಗೊಳಿಸಿ, ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳದಿದ್ದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅಂತರ್ಜಲ ಮಟ್ಟ ವೇಗವಾಗಿ ಕುಸಿಯುತ್ತಿದ್ದು, 12 ಜಿಲ್ಲೆಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ, ಭತ್ತ, ಜೋಳ ಹಾಗೂ ದ್ವಿದಳ ಧಾನ್ಯಗಳ ಇಳುವರಿ ಕುಂಠಿತಗೊಳ್ಳುವ ಭೀತಿಯಿದೆ, ಇದು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬನ್ನೇ ಮುರಿಯಲಿದೆ. ಬರದಿಂದ ಜಾನುವಾರುಗಳಿಗೆ ಮೇವಿನ ಸಂಕಷ್ಟ ಎದುರಾಗಲಿದೆ ಇದನ್ನು ಬಿಟ್ಟು ಇನ್ನೂ ಹಲವಾರು ಸಮಸ್ಯೆಗಳಿವೆ. ಆದರೆ ಸರ್ಕಾರ ಇದನ್ನು ಬಿಟ್ಟು ಕುರ್ಚಿ ರಾಜಕೀಯ ಮಾಡ್ತಿರೋದು ವಿಷಾದನೀಯ ಸಂಗತಿ ಎಂದಿದ್ದಾರೆ.

Must Read