ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆ ಹಲವೆಡೆ ಕಳೆದ ರಾತ್ರಿಯಿಂದ ಮಳೆಯ ಪ್ರವೇಶವಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಇದರ ಪರಿಣಾಮ ಮಂಗಳವಾರದಿಂದಲೇ ಮೋಡ ಮುಸುಕಿದ ವಾತಾವರಣ ಕಾಣಿಸಿಕೊಂಡಿತ್ತು. ಮಂಗಳವಾರ ಮಧ್ಯರಾತ್ರಿಯಿಂದ ಹಲವೆಡೆ ಸಾಧಾರಣ ಮಳೆಯಾಗುತ್ತಿದೆ.
ಈ ನಡುವೆ ಮುಂದಿನ 3-4 ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಕರಾವಳಿಯುದ್ದಕ್ಕೂ ಸಮುದ್ರದಲ್ಲಿ 40 ರಿಂದ 55 ಕಿಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಚ್ಚರಿಕೆ ನೀಡಿದೆ.