ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾನುವಾರ ಮೈಸೂರಿಗೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಾಹ್ನ ೨.೪೦ಕ್ಕೆ ಬಿಜೆಪಿ ಪ್ರಮುಖರ ಜತೆ ಸಭೆ ನಡೆಸಲಿದ್ದು, ಲೋಕಸಭೆ ಚುನಾವಣಾ ಹಿನ್ನೆಲೆಯಲ್ಲಿ ಈ ಸಭೆ ಬಹಳಷ್ಟು ಮಹತ್ವ ಪಡೆದುಕೊಂಡಿದೆ.
ಈ ಸಭೆಯಲ್ಲಿ ಚಿನಾವಣಾ ರಣತಂತ್ರ ಕುರಿತಾಗಿ ಶಾ ಸುಮಾರು ಎರಡು ಗಂಟೆಗಳ ಕಾಲ ಪಕ್ಷದ ವಿವಿಧ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಅಮಿತ್ ಶಾ ಮೈಸೂರು ಭೇಟಿಯ ಬೆನ್ನಿಗೇ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಿಂದಲೇ ಚುನಾವಣಾ ರಣಕಹಳೆ ಮೊಳಗಲಿದ್ದಾರೆ ಎಂಬ ಬಗ್ಗೆ ಚರ್ಚೆಗಳು ರಾಜಕೀಯ ಪಡಸಾಲೆಗಳಲ್ಲಿ ಬಿರುಸು ಪಡೆದುಕೊಂಡಿವೆ.
ಇಂದು ಬೆಳಗ್ಗೆ ಬಿಜೆಪಿ ಮುಖಂಡರ ಜೊತೆ ಒಂದು ಸುತ್ತಿನ ಸಭೆ ನಡೆಸಿ ಬಳಿಕ ಮಧ್ಯಾಹ್ನ ಚಾಮುಂಡಿಬೆಟ್ಟಕ್ಕೆ ತೆರಳಲಿರುವ ಶಾ, ಅಲ್ಲಿ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಮಂಡಕಹಳ್ಳಿ ಏರ್‌ಪೋರ್ಟ್‌ಗೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮಕ್ಕೆ ತೆರಳಿ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ ೨.೩೦ಕ್ಕೆ ಮತ್ತೆ ಡಿಸನ್ ಬ್ಲೂ ಹೋಟೆಲ್‌ಗೆ ಆಗಮಿಸಲಿರುವ ಅವರು, ಮಧ್ಯಾಹ್ನ ೨.೪೦ಕ್ಕೆ ಬಿಜೆಪಿ ಪ್ರಮುಖರ ಜತೆ ಸಭೆ ನಡೆಸಲಿದ್ದಾರೆ.