ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಶಾರುಖ್ ಖಾನ್ ಕಣ್ಣಿನಲ್ಲಿ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಅಮೇರಿಕಾದಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಇತ್ತೀಚೆಗೆ ಯುಕೆಯಿಂದ ಹಿಂದಿರುಗಿದ ನಟ ಈಗ ಕಣ್ಣಿನ ಚಿಕಿತ್ಸೆಗಾಗಿ ತುರ್ತಾಗಿ ಅಮೆರಿಕಕ್ಕೆ ಹಾರಲಿದ್ದಾರೆ ಎಂದು ಹೇಳಲಾಗಿದೆ.
ವರದಿಗಳ ಪ್ರಕಾರ, ನಟ ಶಾರುಖ್ ಖಾನ್ ಜುಲೈ 29ರಂದು ಶಸ್ತ್ರಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ಹೋಗಿದ್ದರು. ಆದರೆ, ಚಿಕಿತ್ಸೆಯು ಯೋಜಿಸಿದಂತೆ ನಡೆಯಲಿಲ್ಲ. ಹಾಗಾಗಿ ಅವರು ವಿದೇಶದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ. ಆದರೆ ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿ ಈ ಸುದ್ದಿಯನ್ನು ದೃಢಪಡಿಸಿಲ್ಲ.
ಈ ವರ್ಷದ ಆರಂಭದಲ್ಲಿ, ನಟ ಶಾರುಖ್ ಖಾನ್ ಅವರನ್ನು ಹೀಟ್ ಸ್ಟ್ರೋಕ್ ಮತ್ತು ನಿರ್ಜಲೀಕರಣದಿಂದಾಗಿ ಗುಜರಾತ್‍ನ ಅಹಮದಾಬಾದ್‍ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಸಮಯದಲ್ಲಿ ತಮ್ಮ ತಂಡ ಕೋಲ್ಕತಾ ನೈಟ್ ರೈಡರ್ಸ್ ಅನ್ನು ಬೆಂಬಲಿಸಲು ಅವರು ಅಲ್ಲಿದ್ದಿದ್ದರು.