ದೆಹಲಿಯ ಶಾಹೀನ್ ಬಾಗ್‌ನಲ್ಲಿ ಡ್ರಗ್ಸ್ ದಂಧೆ: ಬಂಧಿತ ಆರೋಪಿಗಳು ಏಳು ದಿನಗಳ ಪೊಲೀಸ್ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಏಪ್ರಿಲ್ 27 ರಂದು ದೆಹಲಿಯ ಶಾಹೀನ್ ಬಾಗ್ ಪ್ರದೇಶದ ವಸತಿ ಫ್ಲಾಟ್‌ನಲ್ಲಿ 100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ 50 ಕೆಜಿ ಹೆರಾಯಿನ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ವರು ಆರೋಪಿಗಳನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ಈ ಬಂಧಿತ ಆರೋಪಿಗಳಲ್ಲಿ ಇಬ್ಬರು ಅಫ್ಘಾನ್ ಪ್ರಜೆಗಳು ಮತ್ತು ಇಬ್ಬರು ಭಾರತೀಯ ಪ್ರಜೆಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
NCBಯ ಉಪ ಮಹಾನಿರ್ದೇಶಕ ಸಂಜಯ್ ಸಿಂಗ್, ವಶಪಡಿಸಿಕೊಂಡ ಹೆರಾಯಿನ್ ಅಫ್ಘಾನಿಸ್ತಾನದಿಂದ ಬಂದದ್ದು, ಮಾದಕವಸ್ತು ಹಣವನ್ನು ಹವಾಲಾ ಮೂಲಕ ರವಾನಿಸಲಾಗಿದೆ ಎಂದು ಶಂಕಿಸಲಾಗಿದೆ. ಇಂಡೋ-ಆಫ್ಘನ್ ಸಿಂಡಿಕೇಟ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಸ್ಥಳೀಯವಾಗಿ ಹೆರಾಯಿನ್ ತಯಾರಿಕೆ ಮತ್ತು ಕಲಬೆರಕೆ ಮಾಡುವಲ್ಲಿ ಪರಿಣಿತಿ ಹೊಂದಿದೆ ಎಂದು ತನಿಖೆಯಿಂದ ತಿಳಿದುಬಂದಿರುವುದಾಗಿ ಎಂದು ಎನ್‌ಸಿಬಿ ಅಧಿಕಾರಿ ತಿಳಿಸಿದ್ದಾರೆ.

ಇದರ ಹಿಂದೆ ಬೇರೆ ಯಾರಿದ್ದಾರೆ ಎಂದು ವಿಚಾರಣೆ ನಡೆಯುತ್ತಿದೆ. ದುಬೈನಿಂದ ಕಾರ್ಯಾಚರಿಸುತ್ತಿರುವ ಮಾಸ್ಟರ್‌ಮೈಂಡ್ ಯಾರೆಂದು ತಿಳಿಯಲು ಎನ್‌ಸಿಬಿ ತಂಡ ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!