ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ಆಲ್ರೌಂಡರ್ ಏಂಜೆಲೋ ಮ್ಯಾಥ್ಯೂಸ್ ಅವರನ್ನು ಟೈಮ್ಡ್ ಔಟ್ ಮಾಡುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದ ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ವಿಶ್ವಕಪ್ ಟೂರ್ನಿಯಿಂದಲೇ ನಿರ್ಗಮಿಸಿದ್ದಾರೆ.
ಎಡಗೈ ತೋರುಬೆರಳಿನ ಗಾಯಕ್ಕೆ ತುತ್ತಾಗಿರುವ ಶಕೀಬ್ ಅಲ್ ಹಸನ್ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತಿಳಿಸಿದೆ.
ನವೆಂಬರ್ 6 ರಂದು ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಶಕೀಬ್ ಅಲ್ ಹಸನ್ ಗಾಯಕ್ಕೆ ತುತ್ತಾಗಿದ್ದಾರೆ. ಇದರಿಂದಾಗಿ ಆಸ್ಟ್ರೇಲಿಯಾ ವಿರುದ್ಧ ಅಂತಿಮ ಲೀಗ್ ಪಂದ್ಯಕ್ಕೆ ಶಕೀಬ್ ಅಲ್ ಹಸನ್ ಲಭ್ಯರಿಲ್ಲ. ಶಕೀಬ್ ಅಲ್ ಹಸನ್ ಬದಲಿಗೆ ಅನಾಮುಲ್ ಹಕ್ ಅವರನ್ನು ಬದಲಿ ಆಟಗಾರರಾಗಿ ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ಉಪನಾಯಕ ನಜ್ಮುಲ್ ಹುಸೇನ್ ಶಾಂಟೋ, ಶಕೀಬ್ ಅನುಪಸ್ಥಿತಿಯಲ್ಲಿ ಬಾಂಗ್ಲಾದೇಶ ತಂಡವನ್ನು ಮುನ್ನಡೆಸಲಿದ್ದಾರೆ.
ನವೆಂಬರ್ 11 ರಂದು ಪುಣೆಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಪಂದ್ಯವನ್ನು ಬಾಂಗ್ಲಾದೇಶದ ಆಡಲಿದೆ.