ಶಕ್ತಿ ಯೋಜನೆಗೆ ಎರಡು ವರ್ಷದ ಸಂಭ್ರಮ: ಈವರೆಗೂ 474.82 ಕೋಟಿ ನಾರಿಯರ ಉಚಿತ ಪ್ರಯಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಎರಡು ವರ್ಷಗಳನ್ನು ಪೂರೈಸಿದ್ದು, ಯೋಜನೆಯಡಿ ಈ ವರೆಗೂ 475 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಸಾರಿಗೆ ನಿಗಮಗಳಿಗೆ 11,994 ಕೋಟಿ ರೂ. ಮೌಲ್ಯದ ಟಿಕೆಟ್‌ಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಜಾರಿಗೆ ತಂಡ ಮೊದಲ ಗ್ಯಾರಂಟಿ ಯೋಜನೆ ಇದಾಗಿದ್ದು, ಯೋಜನೆಗೆ ಅಗಾಧ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯೋಜನೆಯು ಮಹಿಳಾ ಪ್ರಯಾಣಿಕರ ಸಂಖ್ಯೆಯನ್ನಷ್ಟೇ ಅಲ್ಲದೆ, ಪುರುಷ ಪ್ರಯಾಣಿಕರ ಸಂಖ್ಯೆಯಲ್ಲೂ ಹೆಚ್ಚಳವಾಗಲು ಸಹಾಯ ಮಾಡಿದೆ ಎಂದು ಸಾರಿಗೆ ಸಂಸ್ಥೆ ನಿಗಮದ ಅಧಿಕಾರಿಗಳು ಹೇಳಿದ್ದಾರೆ.

ಶಕ್ತಿ ಯೋಜನೆಗಳು ಇತರ ರಾಜ್ಯಗಳ ಗಮನವನ್ನೂ ಸೆಳೆದಿದ್ದು, ಆಂಧ್ರಪ್ರದೇಶದ ಸಾರಿಗೆ ನಿಗಮದ ಅಧಿಕಾರಿಗಳೂ ಕೂಡ ರಾಜ್ಯಕ್ಕೆ ಭೇಟಿ ನೀಡಿ, ಯೋಜನೆ ಅನುಷ್ಠಾನ, ಸವಾಲುಗಳು, ಕಾರ್ಯನಿರ್ವಹಣೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆಂದು ತಿಳಿಸಿದ್ದಾರೆ.

ಈ ಯೋಜನೆಯು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆಯನ್ನು ಹೆಚ್ಚಿಸಿದ್ದು, ಇದರಿಂದ ಪ್ರವಾಸೋದ್ಯಮಕ್ಕೂ ಲಾಭವಾಗುವಂತೆ ಮಾಡಿದೆ. ಸರ್ಕಾರವು ಯೋಜನೆ ಮುಂದುವರೆಸುವುದಾಗಿ ಹೇಳಿದೆ.

2023 ಜೂನ್ 11 ರಿಂದ 2025 ಜೂನ್‌ 10 ವರೆಗೂ ಕರ್ನಾಟಕ ನಾಲ್ಕು ಸಾರಿಗೆ ನಿಗಮಗಳಲ್ಲಿ ಒಟ್ಟು 4,74,82,49,843 ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಅಂದರೆ, ನಿತ್ಯ ಸರಾಸರಿ 65 ಲಕ್ಷ ಮಹಿಳೆಯರು ಈ ಸೌಲಭ್ಯ ಪಡೆದಂತಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!