ಹೊಸ ಆದಿಗಂತ ಡಿಜಿಟಲ್ ಡೆಸ್ಕ್:
ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್ ವಿತರಣೆ ಅವಧಿ ಮತ್ತೆ ಆರು ತಿಂಗಳಿಗೆ ವಿಸ್ತರಣೆ ಮಾಡಿದ್ದು, ಇದಕ್ಕೆ ಸೇವಾ ಶುಲ್ಕ 14.16 ರೂ. ನಿಗದಿ ಮಾಡಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಸಂಪುಟ ನಿರ್ಣಯಗಳನ್ನು ಕಾನೂನು ಸಟಿವ ಹೆಚ್.ಕೆ ಪಾಟೀಲ್ ಸುದ್ಧಿಗೋಷ್ಠಿಯಲ್ಲಿ ವಿವರಿಸಿದರು.
ಸಾರಿಗೆ ಇಲಾಖೆಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ ಸ್ಮಾರ್ಟ್ ಕಾರ್ಡ್ ವಿತರಿಸಲು ಮೂರು ತಿಂಗಳು ಕಾಲಾವಕಾಶ ನೀಡಲಾಗಿತ್ತು. ಶಕ್ತಿ ಸ್ಮಾರ್ಟ್ ಕಾರ್ಡ್ ಗಡುವನ್ನು ಮತ್ತೆ ಆರು ತಿಂಗಳು ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಕೆಎಸ್‌ಆರ್‌ಟಿಸಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 250 ಹೊಸ ಬಸ್, ವಾಯುವ್ಯ ಸಾರಿಗೆಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 375 ಹೊಸ ಬಸ್, ಬಿಎಂಟಿಸಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಎಸಿ ಎಲೆಕ್ಟ್ರಿಕ್ ಬಸ್ ಮತ್ತು ಕರ್ನಾಟಕ ಸಾರಿಗೆಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 250 ಹೊಸ ಬಸ್ ಖರೀದಿಗೆ ಸಚಿವ ಸಂಪುಟಲ್ಲಿ ಅನುಮೋದನೆ ದೊರೆತಿದೆ ಎಂದು ಹೇಳಿದರು.