ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ಬಾಸ್ ಸೀಸನ್ 8ರ ಸ್ಪರ್ಧಿ, ಲಕ್ಷ್ಮೀ ಬಾರಮ್ಮ ಸೀರಿಯಲ್ ಖ್ಯಾತಿಯ ಶಮಂತ್ ಬ್ರೋ ಗೌಡ ಎಂಗೇಜ್ ಮೆಂಟ್ ಆಗಿದ್ದಾರೆ.
ನಟ ಶಮಂತ್ ಬ್ರೋ ಗೌಡ ಅವರನ್ನು ಮದುವೆಯಾಗುತ್ತಿರುವ ಹುಡುಗಿಯ ಹೆಸರು ಮೇಘನಾ. ಇವರು ಪ್ರೊಫೆಷನಲ್ ಮೇಕಪ್ ಆರ್ಟಿಸ್ಟ್ ಆಗಿದ್ದಾರೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ವಿವ್ ಆಗಿದ್ದಾರೆ.
ಪ್ರೇಮಿಗಳ ದಿನದಂದು ಇವರಿಬ್ಬರ ಪ್ರೀತಿಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಪ್ರೀತಿಸಿದ ಹುಡುಗಿಯ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಶಮಂತ್ ಗೌಡ.
ಶಮಂತ್, ಮೇಘನಾ ಮದುವೆಗೂ ತಯಾರಿ ನಡೆದಿದ್ದು, ಶೀಘ್ರವೇ ಬ್ರೋಗೌಡ ಅವರ ಮದುವೆ ಯಾವಾಗ? ಎಲ್ಲಿ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದಾರೆ. ಶಮಂತ್ ಬ್ರೋ ಗೌಡ ಅವರು ತಮ್ಮ ಅದ್ಭುತ ಅಭಿನಯದ ಮೂಲಕವೇ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದಾರೆ.
‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಹೀರೋ ಆಗಿ ಕಾಣಿಸಿಕೊಂಡ ಶಮಂತ್ ಬ್ರೋ ಗೌಡ ಅವರು ಕಿರುತೆರೆಯಿಂದ ಬೆಳ್ಳಿ ತೆರೆಗೆ ಕಾಲಿಡೋಕೆ ಸಜ್ಜಾಗಿದ್ದರು. ಒಂದು ತಿಂಗಳ ಹಿಂದಷ್ಟೇ ಹೊಸ ಜಾನರ್‌ನ ಹೊಸ ಕನ್ನಡ ಸಿನಿಮಾವೊಂದರಲ್ಲಿ ಶಮಂತ್ ಹೀರೋ ಆಗುವುದರ ಬಗ್ಗೆ ಅಪ್ಡೇಟ್ ಕೊಟ್ಟಿದ್ದಾರೆ.