January19, 2026
Monday, January 19, 2026
spot_img

ಶಾಮನೂರು ಶಿವಶಂಕರಪ್ಪ ನಿಧನ: ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪವನ್ನು ಸೂಚಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ ಎಂದಿದ್ದಾರೆ.

ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ ಎಂದು ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Must Read