Monday, December 15, 2025

ಶಾಮನೂರು ಶಿವಶಂಕರಪ್ಪ ನಿಧನ: ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಶಾಸಕ, ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 95 ವರ್ಷದ ಕಾಂಗ್ರೆಸ್ ನಾಯಕ ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿರುವ ಶಾಮನೂರು ಶಿವಶಂಕರಪ್ಪ ಅಗಲಿಕೆಯಿಂದ ದಾವಣೆಗೆರೆ ಜಿಲ್ಲಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನರಾಗಿರುವ ಕಾರಣ ಅವರ ಗೌರವಾರ್ಥವಾಗಿ ದಾವಣೆಗೆರೆ ಜಿಲ್ಲಾಧಿಕಾರಿಗಳು ನಾಳೆ (ಡಿ.15) ದಾವಣಗೆರೆ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ನೀಡಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರ (ಡಿಸೆಂಬರ್ 27) ರಂದು ಪೂರ್ತಿ ದಿನ ಶಾಲೆ ನಡೆಸಿ ಸರಿದೂಗಿಸಲು ಸೂಚಿಸಲಾಗಿದೆ.

ದಾವಣೆಗರೆ ವಿವಿಯ ಹಲವು ಪರೀಕ್ಷೆಗಳು ಮುಂದೂಡಿಕೆ
ದಾವಣಗೆರೆ ವಿಶ್ವವಿದ್ಯಾಲಯದ ವ್ಯಾಪ್ತಿಯಡಿಯಲ್ಲಿರುವ ಹಲವು ಕಾಲೇಜುಗಳ ಪರೀಕ್ಷೆಯನ್ನು ಮುಂದೂಡಲಾಗಿದೆ. ಇಂದು ರಾತ್ರಿ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ಬೆಂಗಳೂರಿನ ಮಹಾಸಭಾ ಬಳಿ ಅರ್ಧ ಗಂಟೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಳಿಕ ದಾವಣೆಗೆರೆ ಕೊಂಡೊಯ್ಯಲಾಗುತ್ತದೆ. ದಾವಣಗೆರೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಬಳಿಕ ದಾವಣೆಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

error: Content is protected !!