Wednesday, September 27, 2023

Latest Posts

ಶುಶ್ರೂಷಕಿಯರಿಗೆ ಅವಮಾನ: 15 ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತು

ಹೊಸದಿಗಂತ ವರದಿ, ಹುಬ್ಬಳ್ಳಿ:

ಶುಶ್ರೂಷಕಿಯರ ಅವಮಾನಿಸುವಂತಹ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವೈದ್ಯಕೀಯ ೧೫ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ.

ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ವೈದ್ಯಕೀಯ ವಿದ್ಯಾರ್ಥಿಗಳು ಕಿಮ್ಸ್ ಆಸ್ಪತ್ರೆಯ ಆಡಳಿತ ಕಚೇರಿ ಎದುರು ವಿಡಿಯೋವೊಂದನ್ನು ಚಿತ್ರೀಕರಿಸಿದ್ದರು. ಈ ವಿಡಿಯೋದಲ್ಲಿ ಶುಶ್ರೂಷಕಿಯರ ಹಾಗೂ ಮಹಿಳೆಯರಿಗೆ ಅವಮಾನಿಸುವಂತಹ ಹಾಡು ಹಾಗೂ ದೃಶ್ಯಗಳಿವೆ ಎಂದು ಕರ್ನಾಟಕ ಶುಶ್ರೂಷಕರ ಸಂಘ ಸದಸ್ಯರು ಸೋಮವಾರ ಪತ್ರಿಭಟನೆ ನಡೆಸಿ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದರು.

ಈ ಹಿನ್ನೆಲೆ ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಅವರು ಏಳು ಜನರೊಳಗೊಂಡ ಸಮಿತಿ ರಚಿಸಿ ವಿಚಾರಣೆ ನಡೆಯಲು ಸೂಚಿಸಿದ್ದಾರೆ.

ಸಮಿತಿಯೂ ವಿಡಿಯೋ ಸತ್ಯಾಸತ್ಯತೆ ಪರಿಶೀಲಿಸಿ ವಿದ್ಯಾರ್ಥಿಗಳ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ಎಂಬುದು ನಿರ್ಧರಿಸಲಿದೆ. ಈ ಕುರಿತು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಪ್ರತಿಕ್ರಿಸಿ, ವಿದ್ಯಾರ್ಥಿಗಳ ಕ್ಷಮೆಯಾಚಿಸಿದ್ದಾರೆ. ವಿಡಿಯೋ ಪರಿಶೀಲಿಸಿ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಸಮಿತಿ ವರದಿ ನೀಡುವರೆಗೂ ವಿದ್ಯಾರ್ಥಿಗಳನ್ನು ಅಮಾನತ್ತು ಮಾಡಲಾಗುತ್ತದೆ. ಬಳಿಕ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!