ಅಂದು ಅವಮಾನ… ಇಂದು ಗೌರವ: ರಾಜೀನಾಮೆಗೆ ಮುಂದಾಗಿದ್ದ ಪೊಲೀಸ್ ಅಧಿಕಾರಿಗೆ ಮುಂಬಡ್ತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಂದು ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ಅವಮಾನಕ್ಕೊಳಗಾದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಅವರಿಗೆ ಅದೃಷ್ಟ ಒಲಿದಿದೆ.

ಬೆಳಗಾವಿಯ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯನವರಿಂದ ಮುಜುಗರಕ್ಕೀಡಾಗಿ ಸ್ವಯಂ ನಿವೃತ್ತಿಗೆ ಪತ್ರ ಬರೆದಿದ್ದ ನಾರಾಯಣ ಬರಮನಿ ಅವರಿಗೆ ರಾಜ್ಯ ಸರ್ಕಾರ ಮುಂಬಡ್ತಿ ನೀಡಿದೆ. ಧಾರವಾಡ ಎಎಸ್ಪಿಯಾಗಿದ್ದ ನಾರಾಯಣ ಬರಮನಿ ಅವರಿಗೆ ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿ ಹುದ್ದೆ ನೀಡಲಾಗಿದೆ. ಈ ಮೂಲಕ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ.

ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ ನಾರಾಯಣ ಬರಮನಿ ಅವರನ್ನು ವೇದಿಕೆಗೆ ಕರೆಸಿದ್ದ ಸಿಎಂ ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದರು. ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾದ ನಂತರ ಬರಮನಿ ಅವರು ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ರಾಜ್ಯ ಸರ್ಕಾರ ಭಾರೀ ಟೀಕೆ ಗುರಿಯಾಗಿತ್ತು. ಕೊನೆಗೆ ನಾರಾಯಣ ಬರಮನಿ ಅವರನ್ನು ಹಿರಿಯ ಅಧಿಕಾರಿಗಳು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ನಂತರ ನಾರಾಯಣ ಬರಮನಿ ಅವರು ಕೆಲಸಕ್ಕೆ ಹಾಜರಾಗಿದ್ದರು. ಇದರ ಬೆನ್ನಲ್ಲೇ ಇದೀಗ ನಾರಾಯಣ ಬರಮನಿ ಅವರಿಗೆ ಮುಂಬಡ್ತಿ ನೀಡಿರುವು ಅಚ್ಚರಿಕೆ ಕಾರಣವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!