ಕಾಂಗ್ರೆಸ್ ನಾಯಕಿಯೊಬ್ಬರ ಕಾರು ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಂಗ್ರೆಸ್ ಪಕ್ಷದ ಮಹಿಳಾ ನಾಯಕಿ ಪಂಖೂರಿ ಪಾಠಕ್ ಅವರ ಕಾರನ್ನು ದೆಹಲಿಯಲ್ಲಿ ಕಳವು ಮಾಡಿದ್ದು, ಇದಕ್ಕೆ ಸಂಬಂಧಿಸಿದ ವೀಡಿಯೋವನ್ನು ಪಂಖುರಿ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಬಿಡುಗಡೆ ಮಾಡಿದ್ದಾರೆ. ಕಳೆದ ಬುಧವಾರ ರಾತ್ರಿ ದೆಹಲಿಯ ಜನಕ್‌ಪುರಿಯಲ್ಲಿರುವ ತಿಹಾರ್ ಜೈಲಿನ ಬಳಿ ಘಟನೆ ನಡೆದಿದೆ.

ತಿಹಾರ್‌ ಜೈಲು ಸಮೀಪದ ಬಳಿ ಇತರೆ ವಾಹನಗಳ ಮಧ್ಯದಲ್ಲಿ ನಿಲ್ಲಿಸಲಾಗಿತ್ತು. ಮಧ್ಯರಾತ್ರಿ ಕೆಲವರು ಬಂದು ಕಾರನ್ನು ತೆಗೆದುಕೊಂಡು ಹೋಗಿದ್ದಾರೆ. ಮೊದಲು ಕಾರಿನ ಬಳಿ ಬಂದ ಕಳ್ಳರು ಕಾರ್ ಲಾಕ್ ತೆಗೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದೆ ಸ್ವಲ್ಪ ಸಮಯದ ನಂತರ ಮತ್ತೊಂದು ಕಾರಿನಲ್ಲಿ ಬಂದ ಕಳ್ಳರು ಈ ವೇಳೆ ಸುಲಭವಾಗಿ ಕಾರನ್ನು ತೆಗೆದುಕೊಂಡು ಹೋಗಿದ್ದಾರೆ. ಇದೆಲ್ಲ ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಹೆಚ್ಚಿನ ಭದ್ರತೆಯ ತಿಹಾರ್ ಜೈಲಿನ ಬಳಿ ಇಂತಹ ಕಳ್ಳತನ ನಡೆದರೆ, ದೆಹಲಿಯ ಇತರ ಭಾಗಗಳಲ್ಲಿ ಪರಿಸ್ಥಿತಿ ಹೇಗಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಈ ಘಟನೆ ನಾಚಿಕೆಗೇಡಿನ ಸಂಗತಿ ಎಂದು ಪ್ರತಿಕ್ರಿಯಿಸಿದ್ದಾರೆ. ಆಕೆಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!