ಬಿಸಿಸಿಐ ಹೋಟೆಲ್ ರೂಂನಲ್ಲಿ ವೇಶ್ಯೆಯರ ಜೊತೆ ಶಮಿ ಲೈಂಗಿಕ ಸಂಬಂಧ: ಪತ್ನಿ ಹಸಿನ್ ಜಹಾನ್ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಐಪಿಎಲ್ ಟೂರ್ನಿಯಲ್ಲಿ ಬ್ಯುಸಿಯಾಗಿರುವ ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಕ್ರಿಕೆಟಿಗನ ಬಂಧನಕ್ಕೆ ತಡೆಯಾಜ್ಞೆ ನೀಡಿದ ಕೊಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಅವರ ಪತ್ನಿ ಹಸಿನ್ ಜಹಾನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.ಇದರ ಜೊತೆಗೆ ಜಹಾನ್ ಅವರು ಶಮಿ ವಿರುದ್ಧ ಮತ್ತೆ ಆರೋಪಗಳ ಸುರಿಮಳೆಗೈದಿದ್ದಾರೆ .

ಮೊಹಮ್ಮದ್ ಶಮಿ ಅವರು ತಮ್ಮ ಮದುವೆಯುದ್ದಕ್ಕೂ ವಿವಾಹೇತರ ಸಂಬಂಧಗಳನ್ನು ಹೊಂದಿದ್ದರು ಮತ್ತು ವೇಶ್ಯೆಯರ ಜೊತೆ ಲೈಂಗಿಕ ಸಂಬಂಧವನ್ನು ಹೊಂದಿದ್ದರು. ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಈ ಹಿಂದೆಯೂ ತನ್ನ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಹಸಿನ್ ಆರೋಪಿಸಿದ್ದಾರೆ.

ಬಿಸಿಸಿಐನ ಕ್ರಿಕೆಟ್ ಪ್ರವಾಸಗಳಲ್ಲಿದ್ದಾಗ ಬಿಸಿಸಿಐ ಬುಕ್ ಮಾಡಿದ ಹೋಟೆಲ್ ಕೊಠಡಿಗಳಲ್ಲಿ ವೇಶ್ಯೆಯರೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದರುಎಂದು ದೂರಿದ್ದಾರೆ. ಈಗಲೂ ಹೋಟೆಲ್ ಕೊಠಡಿಗಳ ಒಳಗೆ ಇತರ ಮಹಿಳೆಯರೊಂದಿಗೆ ಲೈಂಗಿಕ ಸಂಬಂಧಗಳಲ್ಲಿ ಶಮಿ ತೊಡಗುತ್ತಿದ್ದಾರೆ ಮತ್ತು ಇದರ ವಿರುದ್ಧ ಧ್ವನಿ ಎತ್ತಲು ನಿರ್ಧರಿಸಿದಾಗ,ಶಮಿ ಮತ್ತು ಅವರ ಕುಟುಂಬ ಸದಸ್ಯರು ತನ್ನ ಮೇಲೆ ಹಲ್ಲೆ ನಡೆಸಿದರು ಎಂದು ಜಹಾನ್ ಆರೋಪಿಸಿದ್ದಾರೆ.

ಸುಪ್ರೀಂ ಕೋರ್ಟ್ನಲ್ಲಿ ಹಸಿನ್ ಜಹಾನ್ ಪರ ವಕೀಲರು ಸಲ್ಲಿಸಿದ ಅರ್ಜಿಯಲ್ಲಿ,ಅರ್ಜಿದಾರರು ಅದರ ವಿರುದ್ಧ ಧ್ವನಿ ಎತ್ತಿದಾಗ, ಆಕೆಯ ಪತಿ ಮತ್ತು ಆತನ ಕುಟುಂಬ ಸದಸ್ಯರು ಆಕೆಯ ಮೇಲೆ ಹಲ್ಲೆ ನಡೆಸುತ್ತಿದ್ದರು ಮತ್ತು ಅವರು ನಿರಂತರವಾಗಿ ವರದಕ್ಷಿಣೆಗಾಗಿ ಒತ್ತಾಯಿಸುತ್ತಿದ್ದರ’ ಎಂದಿದ್ದಾರೆ. ವರದಕ್ಷಿಣೆಗಾಗಿ ಶಮಿ ತನಗೆ ಬೆದರಿಕೆ ಮತ್ತು ಕಿರುಕುಳ ನೀಡಿದ್ದಾರೆ.ಹೀಗಾಗಿ ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಬೇಕು. ಸೆಲೆಬ್ರಿಟಿ ಸ್ಥಾನಮಾನದ ಕಾರಣದಿಂದ ಟೀಂ ಇಂಡಿಯಾ ಆಟಗಾರನಿಗೆ ಯಾವುದೇ ವಿಶೇಷ ಚಿಕಿತ್ಸೆ ನೀಡಬಾರದು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!