ಶಾಂಘೈ ಸಹಕಾರ ಸಂಸ್ಥೆ ಸಭೆ: ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ರಾಜನಾಥ್ ಸಿಂಗ್ ಕರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಂಘೈ ಸಹಕಾರ ಸಂಸ್ಥೆ (SCO) ಸದಸ್ಯ ರಾಷ್ಟ್ರಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಶುಕ್ರವಾರ ಮತ್ತೊಮ್ಮೆ ಭಯೋತ್ಪಾದನೆ (terrorism) ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ಮತ್ತು ಅದರ ಎಲ್ಲಾ ರೀತಿಯ ಬೆದರಿಕೆಯನ್ನು ತೊಡೆದುಹಾಕಲು ಕರೆ ನೀಡಿದ್ದಾರೆ.

ವರ್ಚುವಲ್ ಆಗಿ ಸಭೆಯಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಭಾಗವಹಿಸಲು ನಿರ್ಧರಿಸಲಾಗಿತ್ತು. ನಾವು ಒಗ್ಗಟ್ಟಿನಿಂದ ಭಯೋತ್ಪಾದನೆ ವಿರುದ್ಧ ಹೋರಾಡಬೇಕು. ಎಸ್‌ಸಿಒ ಪ್ರಬಲವಾಗಿ ಹೊರಹೊಮ್ಮಬೇಕಾದರೆ, ನಾವು ಒಟ್ಟಾಗಿ ಹೋರಾಡಬೇಕು. ಭಯೋತ್ಪಾದಕ ಗುಂಪುಗಳು ಸಾಮಾಜಿಕ ಮಾಧ್ಯಮ ಮತ್ತು ಕ್ರೌಡ್‌ಫಂಡಿಂಗ್‌ನಂತಹ ಹೊಸ ವಿಧಾನಗಳನ್ನು ಬಳಸುತ್ತಿವೆ ಎಂದು ಸಿಂಗ್ ಹೇಳಿದ್ದಾರೆ.

ಭಾರತ, ರಷ್ಯಾ, ಚೀನಾ ಮತ್ತು ಎಸ್ ಸಿಒದ ಇತರ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ದೆಹಲಿಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಪ್ರಾದೇಶಿಕ ಭದ್ರತಾ ಸವಾಲುಗಳು ಮತ್ತು ಸಂಬಂಧಿತ ವಿಷಯಗಳ ಕುರಿತು ಚರ್ಚಿಸಿದರು.

ಇಲ್ಲಿ ನಮ್ಮೆಲ್ಲರಿಗೂ ನಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು, ನಮ್ಮ ದೃಷ್ಟಿಕೋನಗಳು ಮತ್ತು ಕಾಳಜಿಗಳನ್ನು ಹಂಚಿಕೊಳ್ಳಲು ಅವಕಾಶವನ್ನು ಒದಗಿಸುತ್ತದೆ. ನಮ್ಮ ಮುಂದಿರುವ ಸವಾಲುಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಪ್ರಮುಖ ವೇದಿಕೆ ಇದಾಗಿದೆ ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.

ಎಸ್‌ಸಿಒವನ್ನು ಬಲಿಷ್ಠಗೊಳಿಸಲು ಭಾರತವು ಸಂಪೂರ್ಣ ಬದ್ಧವಾಗಿದ್ದು, ಎಸ್‌ಸಿಒ ಆದೇಶದ ಅನುಷ್ಠಾನಕ್ಕೆ ಮತ್ತು ಸಾಮಾನ್ಯ ಸವಾಲುಗಳನ್ನು ಎದುರಿಸುವುದಕ್ಕೆ ಸಹಾಯವಾಗಿ ನಿಲ್ಲುತ್ತದೆ.ಸುರಕ್ಷಿತ, ಸ್ಥಿರ ಮತ್ತು ಸಮೃದ್ಧ ಪ್ರದೇಶವನ್ನು ಖಚಿತಪಡಿಸಿಕೊಳ್ಳಲು, ನಾವು ನಮ್ಮ ಕಾರ್ಯಸೂಚಿಯ ಮೇಲೆ ಕೇಂದ್ರೀಕರಿಸಬೇಕಾಗಿದೆ. ಇದು ಪ್ರತಿ ಸದಸ್ಯ ರಾಷ್ಟ್ರದ ಜನರ ಜೀವನದ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಸಿಂಗ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!