September 4, 2026
Friday, September 4, 2026
spot_img

ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಶಿಕ್ಷಕರ ಕರ್ತವ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸೆಪ್ಟೆಂಬರ್ 5 ರ ‘ಶಿಕ್ಷಕರ ದಿನಾಚರಣೆ’ಯ ಮುನ್ನಾದಿನದಂದು ದೇಶದ ಸಮಸ್ತ ಶಿಕ್ಷಕರಿಗೆ ಶುಭ ಹಾರೈಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ವಿದ್ಯಾರ್ಥಿಗಳನ್ನು ಕೇವಲ ವಿದ್ಯಾವಂತರನ್ನಾಗಿ ಮಾಡುವುದಷ್ಟೇ ಅಲ್ಲ, ಅವರನ್ನು ಉತ್ತಮ ಮಾನವೀಯ ಮೌಲ್ಯಗಳುಳ್ಳ ಸತ್ಪ್ರಜೆಗಳನ್ನಾಗಿ ರೂಪಿಸುವುದು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.

ಶಿಕ್ಷಕರ ನಿಸ್ವಾರ್ಥ ಸೇವೆಯನ್ನು ಕೊಂಡಾಡಿರುವ ಮುರ್ಮು, ಬದಲಾಗುತ್ತಿರುವ ಡಿಜಿಟಲ್ ಯುಗಕ್ಕೆ ತಕ್ಕಂತೆ ಶಿಕ್ಷಕರು ಹೊಸ ತಂತ್ರಜ್ಞಾನ ಹಾಗೂ ಆಧುನಿಕ ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ನಮ್ಮ ಶಿಕ್ಷಕರು ತಮ್ಮ ಮಾರ್ಗದರ್ಶನ ಮತ್ತು ಪ್ರೇರಣೆಯ ಮೂಲಕ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುತ್ತಾರೆ. ಜತೆಗೆ, ಅವರ ನೈತಿಕ ಚಾರಿತ್ರ್ಯವನ್ನು ಬಲಪಡಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಾರೆ ಎಂದಿದ್ದಾರೆ.

ಒಬ್ಬ ಸಮರ್ಪಿತ ಮತ್ತು ಕಾಳಜಿಯುಳ್ಳ ಶಿಕ್ಷಕ ಮಾತ್ರ ಪ್ರತಿ ವಿದ್ಯಾರ್ಥಿಯ ವಿಶಿಷ್ಟ ಸಾಮರ್ಥ್ಯವನ್ನು ಗುರುತಿಸಲು ಸಾಧ್ಯ. ಅಂತಹ ಗುರುಗಳು ವಿದ್ಯಾರ್ಥಿಗಳಿಗೆ ಸದಾ ಸ್ಫೂರ್ತಿಯ ಸೆಲೆಯಾಗಿ ನಿಲ್ಲುವ ಮೂಲಕ, ಅವರು ತಮ್ಮ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಅತ್ಯುತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸುತ್ತಾರೆ ಎಂದು ರಾಷ್ಟ್ರಪತಿ ಮುರ್ಮು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:

25 ಸಾಧಕರಿಗೆ ಸನ್ಮಾನ

ನಾಳೆ ಸೆ. 5 ರಂದು ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ದೇಶದ 25 ಅತ್ಯುತ್ತಮ ಶಿಕ್ಷಕರಿಗೆ ರಾಷ್ಟ್ರಪತಿಗಳು ಈ ಬಾರಿ ‘ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ’ ನೀಡಿ ಗೌರವಿಸಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !