ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಶರದ್ ಪವಾರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

NCP ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ಅವರು ನೀಡಿದ್ದ ರಾಜೀನಾಮೆ ತಿರಸ್ಕಾರವಾಗಿದ್ದು, ಈ ಹಿನ್ನೆಲೆ ಶುಕ್ರವಾರ ಸಂಜೆ ವೈಬಿ ಚವಾಣ್ ಕೇಂದ್ರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶರದ್ ಪವಾರ್ ತಮ್ಮ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದರು.

18 ಸದಸ್ಯರ ಸಮಿತಿಯು ರಾಜೀನಾಮೆಯನ್ನು ತಿರಸ್ಕರಿಸಿದೆ. ಸಭೆಯಲ್ಲಿ, ಶರದ್ ಪವಾರ್ ಸಕ್ರಿಯ ರಾಜಕಾರಣದಲ್ಲಿರುವಾಗ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಎನ್ಸಿಪಿ ಸಮಿತಿ ತಿಳಿಸಿದೆ.

‘ಸಮಿತಿಯು ತೆಗೆದುಕೊಂಡ ನಿರ್ಧಾರವನ್ನು ತೆಗೆದುಕೊಂಡ ನಂತರ ಮತ್ತು ಈ ಎಲ್ಲಾ ಬೇಡಿಕೆಗಳನ್ನ ಪರಿಗಣಿಸಿದ ನಂತರ, ನಾನು ಎನ್ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನನ್ನ ನಿರ್ಧಾರವನ್ನ ಹಿಂತೆಗೆದುಕೊಂಡಿದ್ದೇನೆ. ನಾನು ಈ ನಿರ್ಧಾರವನ್ನ ತೆಗೆದುಕೊಳ್ಳುತ್ತಿದ್ದರೂ, ಪಕ್ಷದಲ್ಲಿ ಹೊಸ ನಾಯಕತ್ವವನ್ನ ರಚಿಸಬೇಕು ಎಂದು ನಾನು ಭಾವಿಸುತ್ತೇನೆ ಮತ್ತು ಅದಕ್ಕಾಗಿ ನಾನು ಕೆಲಸ ಮಾಡುತ್ತೇನೆ’ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!