Wednesday, August 10, 2022

Latest Posts

ಧಾರವಾಡ: ಕಾಯಕ ಶರಣರ ಜಯಂತಿ ಆಚರಣೆ

ಹೊಸದಿಗಂತ ವರದಿ,ಧಾರವಾಡ:

ಜಿಲ್ಲಾಡಳಿತ ಹಾಗೂ ಕನ್ನಡ-ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಭವನದಲ್ಲಿ ಕಾಯಕ ಶರಣರಾದ ಮಾದರ ಚನ್ನಯ್ಯ, ಮಾದರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿ ಅವರ ಜಯಂತಿ ಬುಧವಾರ ಸರಳ ರೀತಿಯಲ್ಲಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಸುಶೀಲಾ ಅವರು ಶರಣರ ಭಾವಚಿತ್ರಗಳಿಗೆ ಪುಷ್ಪ ಗೌರವ ಸಲ್ಲಿಸಿದರು. ಮಾರ್ಕಂಡೇಯ ದೊಡ್ಡಮನಿ ವಚನ ಪ್ರಸ್ತುತ ಪಡಿಸಿದರು.

ಮುಖಂಡರಾದ ಲಕ್ಷ್ಮಣ ಬಕ್ಕಾಯಿ, ಅಶೋಕ ಭಂಡಾರಿ, ಸಂತೋಷ, ಕನ್ನಡ-ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಪುರಸಭೆ ತಹಸೀಲ್ದಾರ ಗೀತಾ ಹೊನಕೇರಿ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss