July 7, 2026
Tuesday, July 7, 2026
spot_img

ಶರಣಬಸವೇಶ್ವರ ಸಂಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ಹೊಸದಿಗಂತ ವರದಿ ಕಲಬುರಗಿ:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಕಲ್ಯಾಣ ಕರ್ನಾಟಕದ ಆರಾಧ್ಯ ದೈವ ಶ್ರೀ ಶರಣಬಸವೇಶ್ವರರ ಸಂಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.ಈ ವೇಳೆ ಸಂಸ್ಥಾನದ 8ನೇ ಪೀಠಾಧಿಪತಿಯಾಗಿದ್ದ ಲಿಂಗೈಕ್ಯ ಡಾ. ಶರಣಬಸವಪ್ಪ ಅಪ್ಪಾ ಅವರ ಗದ್ದುಗೆಗೆ ಗೌರವ ನಮನ ಸಲ್ಲಿಸಿದರು.

ಸಂಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರಿ ಡಾ. ದಾಕ್ಷಾಯಿಣಿ ಎಸ್. ಅಪ್ಪಾ, ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪಾ ಸೇರಿದಂತೆ ಅಪ್ಪಾ ಕುಟುಂಬದ ಸದಸ್ಯರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಸೇರಿದಂತೆ ಸ್ಥಳೀಯ ಸಂಸದರು, ಶಾಸಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !