ಅದಿಚುಂಚನಗಿರಿ ಮಠದಲ್ಲಿ ಶರನ್ನವರಾತ್ರಿ: ಸರಸ್ವತಿ ಪೂಜೆ, ಮಕ್ಕಳಿಗೆ ಅಕ್ಷರಭ್ಯಾಸ

ಹೊಸ ದಿಗಂತ ವರದಿ,ನಾಗಮಂಗಲ :

ತಾಲೂಕಿನ ಅದಿಚುಂಚನಗಿರಿ ಮಹಾಸಂಸ್ಥಾನಮಠದಲ್ಲಿ ಶರನ್ನವರಾತ್ರಿ ಪ್ರಯುಕ್ತ ಬುಧವಾರ ಬೆಳಿಗ್ಗೆ ಸರಸ್ವತಿ ಪೂಜೆ ಮತ್ತು ಚಿಕ್ಕಮಕ್ಕಳಿಗೆ ಅಕ್ಷರಭ್ಯಾಸ ಕಾರ್ಯಕ್ರಮ ನಡೆುತು.

ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆದ ಅಕ್ಷರಭ್ಯಾಸ ಕಾರ್ಯಕ್ರಮದಲ್ಲಿ ಸುಮಾರು 50ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದರು.

ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಅಕ್ಷರಾಭ್ಯಾಸ ಅಥವಾ ವಿದ್ಯಾರಂಭ ನಡೆಸುವ ಪದ್ಧತಿ ಇರುವುದರಿಂದ ಮಕ್ಕಳ ಪೋಷಕರು ತಮ್ಮ ಮಕ್ಕಳನ್ನು ಶ್ರೀಮಠಕ್ಕೆ ಕರೆತಂದು ಶ್ರೀಗಳಿಂದ ಅಕ್ಷರಭ್ಯಾಸ ಮಾಡಿಸಿದರು.

ಅಕ್ಷರಭ್ಯಾಸಕ್ಕೂ ಮುನ್ನ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷವಾಗಿ ಅಲಂಕರಿಸಿದ ಸರಸ್ವತಿ ದೇವಿಯ ಸನ್ನಿಧಿಯಲ್ಲಿ ಗಣಪತಿ ಪೂಜೆ ನೆರವೇರಿಸಲಾಯಿತು.

ನಂತರ ಸರಸ್ವತಿ ವಿಗ್ರಹಕ್ಕೆ ಹಾಲಭಿಷೇಕ ನೆರವೇರಿಸಿ ಪೂಜಿಸುವ ಮೂಲಕ ಮಕ್ಕಳಿಗೆ ಅಕ್ಷರಭ್ಯಾಸ ಕ್ರಿಯೆಯನ್ನು ಶ್ರೀಗಳು ಆರಂಭಿಸಿದರು. ದೊಡ್ಡ ತಟ್ಟೆಯಲ್ಲಿ ಅಕ್ಕಿಯನ್ನು ಇರಿಸಿ ಅದರಲ್ಲಿ ಮಕ್ಕಳ ಕೈಹಿಡಿದುಕೊಂಡು ನವಿಲುಗರಿಯ ಮೂಲಕ ಓಂ ಬೀಜಾಕ್ಷರವನ್ನು ಬರೆಸುವ ಮೂಲಕ ಅಕ್ಷರಭ್ಯಾಸ ಮಾಡಿಸಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!