ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಾಗರದ ಸಿಗಂದೂರು ಚೌಡೇಶ್ವರಿಗೆ (Sigandur Chowdeshwari) ಇನ್ನು ಮುಂದೆ ಭಕ್ತರಿಗೆ ಬರಲು ಕಷ್ಟವಾಗು ಸಾಧ್ಯತೆ ಇದೆ. ಇದಕ್ಕೆ ಕಾರಣ ಶಿವಮೊಗ್ಗ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದೆ. ಹೀಗಾಗಿ ಶರಾವತಿ ಹಿನ್ನೀರಿನ ಮಟ್ಟ ಇಳಿಕೆಯಾಗಿದೆ. ಆದ್ದರಿಂದ ಜೂನ್ 14ರಿಂದ ಸಿಗಂದೂರು ಲಾಂಚ್ನಲ್ಲಿ ಬಸ್, ಕಾರು ಸೇರಿದಂತೆ ಇತರೆ ವಾಹನ ಸಾಗಣೆ ನಿಲ್ಲಿಸಲಾಗುತ್ತಿದೆ.
ಒಂದು ವೇಳೆ ವಾಹನಗಳನ್ನು ಹತ್ತಿಸಿದರೆ ದಡದ ಕೆಸರಿನಲ್ಲಿ ಲಾಂಚ್ ಸಿಕ್ಕಿ ಬೀಳ್ಳುವ ಸಾಧ್ಯತೆ ಇದೆ. ಹಾಗಾಗಿ ಜನರನ್ನು ಮಾತ್ರ ಲಾಂಚ್ಗೆ ಹತ್ತಿಸಲು ನಿರ್ಧರಿಸಲಾಗಿದೆ.
ಈ ಲಾಂಚ್ ಸ್ಥಗಿತಗೊಂಡರೆ ಸಿಗಂದೂರು ಚೌಡೇಶ್ವರಿ ದರ್ಶನಕ್ಕೆ ಬರುವ ಪ್ರವಾಸಿಗರಿಗೆ ತೀವ್ರ ತೊಂದರೆ ಆಗಲಿದ್ದು, ಸುತ್ತಿ ಬಳಸಿ, ದೇವಸ್ಥಾನಕ್ಕೆ ಹೋಗಬೇಕಾದ ಅನಿವಾರ್ಯತೆ ಉಂಟಾಗಲಿದೆ. ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು, ತುಮರಿ, ಬ್ಯಾಕೋಡು, ಕಟ್ಟಿನಕಾರು ಭಾಗದ ಜನರಿಗೆ ಈ ಲಾಂಚ್ ಸಂಪರ್ಕ ಕೊಂಡಿಯಾಗಿದೆ.