ಶರಾವತಿ ಮುಳುಗಡೆ ಸಂತ್ರಸ್ತರಿಗೆ ಆತಂಕ ಬೇಡ: ಯಡಿಯೂರಪ್ಪ ಭರವಸೆ

ಹೊಸದಿಗಂತ ವರದಿ,ಶಿವಮೊಗ್ಗ:

ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಪರಿಹರಿಸುವ ಜವಾಬ್ದಾರಿ ನಮ್ಮದು. ಅದರ ಬಗ್ಗೆ ಯಾರೂ ಆತಂಕ ಪಡಬೇಕಾದ ಅಗತ್ಯವೇ ಇಲ್ಲ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶ್ವಾಸನೆ ನೀಡಿದ್ದಾರೆ.
ಜಿಲ್ಲಾ ಬಿಜೆಪಿ ವತಿಯಿಂದ ನಗರದ ಆರ್ಯ ಈಡಿಗರ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಶರಾವತಿ ಮುಳುಗಡೆ ಸಂತ್ರಸ್ಥರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಇನ್ನು 15-20 ದಿನದಲ್ಲಿ ಸಮಸ್ಯೆಗೆ ಒಂದು ಹಂತದ ಪರಿಹಾರ ಸಿಗಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಜಿಲ್ಲಾಕಾರಿಗಳಿಂದ ಪ್ರಸ್ತಾವನೆ ಸಲ್ಲಿಕೆ ಆಗಲಿದೆ. ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ರೈತರ ಎಲ್ಲಾ ಸಮಸ್ಯೆ ಪರಿಹಾರ ಕಾಣಬೇಕು. ನ್ಯಾಯ ಸಿಗಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶವಾಗಿದೆ ಎಂದರು.
ಈಗಾಗಲೇ ಇದೇ ಉದ್ದೇಶಕ್ಕಾಗಿ ಒಂದು ಬಾರಿ ಕೇಂದ್ರ ಸಚಿವರನ್ನೂ ಭೇಟಿ ಮಾಡಲಾಗಿದೆ. ಅಗತ್ಯ ಬಿದ್ದರೆ ಮತ್ತೊಂದು ಸಾರಿಯೂ ಭೇಟಿ ಮಾಡಲಾಗುವುದು. ಅದಕ್ಕಾಗಿ ದೆಹಲಿಗೆ ಹೋಗಲು ಸಿದ್ಧ. ಇದನ್ನು ಪರಿಹರಿಸುವ ಜವಾಬ್ದಾರಿ ನಮ್ಮದು ಎಂದು ತಿಳಿಸಿದರು.
ರಾಜಕೀಯ ದೊಂಬರಾಟ 
ಶರಾವತಿ ಮುಳುಗಡೆ ಸಂತ್ರಸ್ಥರಿಗೆ ನ್ಯಾಯ ಕೊಡಿಸುವುದಾಗಿ ಕೆಲವರು ಪಾದಯಾತ್ರೆ ಮಾಡಲು ಹೊರಟಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಅವರದೇ ಪಕ್ಷಗಳು ಅಧಿಕಾರದಲ್ಲಿ ಇದ್ದವು. ಆದರೂ ಮಾಡಲಿಲ್ಲ. ಈಗ ರಾಜಕೀಯ ಕಾರಣಕ್ಕೆ ಪಾದಯಾತ್ರೆ, ದೊಂಬರಾಟ ಮಾಡುವುದು ಶೋಭೆ ತರುವುದಿಲ್ಲ. ಅದರಿಂದ ಕವಡೆ ಕಾಸಿನ ಲಾಭವೂ ಆಗುವುದಿಲ್ಲ ಎಂದು ತಿರುಗೇಟು ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!