ಖಲಿಸ್ತಾನಿ ಹತ್ಯೆಯ ಬಗೆಗಿನ ಸಾಕ್ಷ್ಯಾಧಾರಗಳನ್ನು ಕೆಲವು ವಾರಗಳ ಹಿಂದೆಯೇ ಭಾರತದೊಂದಿಗೆ ಹಂಚಿಕೊಳ್ಳಲಾಗಿದೆ: ಟ್ರೂಡೊ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಸರ್ಕಾರಿ ಏಜೆಂಟರು ಭಾಗಿಯಾಗಿದ್ದಾರೆ ಎಂಬುದಕ್ಕೆ ಸಾಕ್ಷ್ಯಾಧಾರಗಳನ್ನು ಕೆಲವು ವಾರಗಳ ಹಿಂದೆ ಭಾರತದೊಂದಿಗೆ ಹಂಚಿಕೊಂಡಿದ್ದೇನೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಶುಕ್ರವಾರ ಹೇಳಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಟ್ರುಡೊ, “ನಾವು ಮಾಡಿರುವ ಆರೋಪಗಳ ಬಗ್ಗೆ ಹಲವು ವಾರಗಳ ಹಿಂದೆ ಕೆನಡಾ ಭಾರತದೊಂದಿಗೆ ಪುರಾವೆಗಳನ್ನು ಹಂಚಿಕೊಂಡಿದೆ” ಎಂದು ಹೇಳಿದ್ದಾರೆ.

“ಭಾರತದೊಂದಿಗೆ ರಚನಾತ್ಮಕವಾಗಿ ಕೆಲಸ ಮಾಡಲು ನಾವು ಸಿದ್ದರಿದ್ದೇವೆ. ಅವರು ನಮ್ಮೊಂದಿಗೆ ತೊಡಗಿಸಿಕೊಳ್ಳುತ್ತಾರೆ ಎಂದು ನಾವು ಭಾವಿಸುತ್ತೇವೆ, ಇದರಿಂದ ನಾವು ಈ ವಿಷಯದ ಆಳದವರೆಗೆ ಹೋಗಿ ತನಿಖೆ ಮಾಡಬಹುದು” ಎಂದಿದ್ದಾರೆ.

ನಿಜ್ಜರ್‌ ಹತ್ಯೆಯ ಹಿಂದೆ ಭಾರತ ಸರಕಾರದ ಏಜೆಂಟ್‌ಗಳ ಕೈವಾಡವಿದೆ ಎಂಬ ಆರೋಪವನ್ನು ನಂಬಲು ವಿಶ್ವಾಸಾರ್ಹ ಕಾರಣಗಳಿವೆ. ಜತೆಗೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಪಾರದರ್ಶಕ ತನಿಖೆಗೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡುವಲ್ಲಿ ಭಾರತ ಸರಕಾರ ನಮ್ಮ ಜತೆ ಕೈಜೋಡಿಸಬೇಕು ಎಂದೂ ಟ್ರುಡೊ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!