ಹೊಸದಿಗಂತ ಡಿಜಿಟಲ್ ಡೆಸ್ಕ್;
ಭಾರತೀಯ ಸೇನಾ ಹಡಗುಗಳ ಮಾಹಿತಿಯನ್ನು ಪಾಕಿಸ್ತಾನದೊಂದಿಗೆ ಹಂಚಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯ ರೋಹಿತ್ (29), ಸಂತ್ರಿ (37) ಬಂಧಿತರು.
ಈ ಬಗ್ಗೆ ಎಸ್ ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿ, ಕಳೆದ ಒಂದೂವರೆ ವರ್ಷಗಳಿಂದ ಆರೋಪಿಗಳು ಹಡಗುಗಳಿಗೆ ಸಂಬಂಧಿಸಿದ ಗೋಪ್ಯ ಮಾಹಿತಿ, ರಹಸ್ಯ ತಾಂತ್ರಿಕ ಮಾಹಿತಿಗಳನ್ನು ವಾಟ್ಸ್ ಆಪ್ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರು. ಕೇರಳದಲ್ಲಿ ಕೆಲಸ ಮಾಡುವ ಸಮಯದಲ್ಲಿ ರೋಹಿತ್ ಹಲವು ಬಾರಿ ಮಾಹಿತಿ ಹಂಚಿಕೊಂಡಿದ್ದು, ಮಲ್ಪೆಗೆ ಬರುವವರೆಗೂ ಈ ಚಟುವಟಿಕೆ ಮುಂದುವರಿದಿತ್ತು.
ಅನುಮಾನದ ಮೇರೆಗೆ ಕೊಚ್ಚಿನ್ ಶಿಪ್ ಯಾರ್ಡ್ ಸಿಇಒ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣ ಸಂಬಂಧ ರಾಷ್ಟ್ರೀಯ ಮಟ್ಟದ ತನಿಖಾ ಸಂಸ್ಥೆಗಳು ಹೆಚ್ಚಿನ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.


