ಹೊಸದಿಗಂತ ಡಿಜಿಟಲ್ ಡೆಸ್ಕ್;
ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಸಮನ್ಸ್ ಜಾರಿ ಮಾಡಿದೆ.
ಶಶಿ ತರೂರ್ ಎಲ್‌ಡಿಎಫ್ ಸರ್ಕಾರದ ಅಭಿವೃದ್ಧಿ ಉಪಕ್ರಮಗಳನ್ನು ಶ್ಲಾಘಿಸಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಬರೆದಿದ್ದ ಅಭಿಪ್ರಾಯ ಲೇಖನ ಕಾಂಗ್ರೆಸ್ ನಲ್ಲಿ ವ್ಯಾಪಕ ಚಟುವಟಿಕೆಗಳಿಗೆ ಕಾರಣವಾಗಿದೆ.
ಈ ಕುರಿತು ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಶಶಿತರೂರ್ ಗೆ ಸಮನ್ಸ್ ಜಾರಿ ಮಾಡಿದೆ.
ಶುಕ್ರವಾರ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಹೊಸ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ಸಭೆ ನಡೆಯಲಿದೆ. ಕೇರಳ ರಾಜ್ಯದಲ್ಲಿ ನಿರ್ಣಾಯಕ ಸ್ಥಳೀಯ ಸಂಸ್ಥೆ ಮತ್ತು ವಿಧಾನಸಭಾ ಚುನಾವಣೆ ಕುರಿತು ಚರ್ಚೆ ನಡೆಯಲಿದೆ. ಕೇರಳ ರಾಜ್ಯದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಶಶಿ ತರೂರ್, ಕೋಡಿಕುನ್ನಿಲ್ ಸುರೇಶ್, ರಮೇಶ್ ಚೆನ್ನಿತ್ತಲ, ಮತ್ತು ಕೆಪಿಸಿಸಿ ಅಧ್ಯಕ್ಷ ಕೆ ಸುಧಾಕರನ್, ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ರಾಷ್ಟ್ರಮಟ್ಟ ಮತ್ತು ರಾಜ್ಯ ಮಟ್ಟದಲ್ಲಿ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿರುವುದಕ್ಕೆ ತರೂರ್ ತಮ್ಮ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ. ಆದಾಗ್ಯೂ, ರಾಹುಲ್ ಗಾಂಧಿ ಜೊತೆಗಿನ ಸಭೆಯಲ್ಲಿ ಏನಾಯಿತು ಎಂಬುದನ್ನು ತರೂರ್ ಈ ವರೆಗೂ ಬಹಿರಂಗಪಡಿಸಿಲ್ಲ.