ಉಗ್ರ ಪೋಷಕ ಪಾಕ್ ಕುರಿತು ಕೊಲಂಬಿಯಾ ಮೃದು ಧೋರಣೆ: ಶಶಿ ತರೂರ್ ಬೇಸರ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಆಪರೇಷನ್ ಸಿಂದೂರ್ ಕಾರ್ಯಾಚರಣೆಯಡಿ ಭಾರತದ ಸೇನಾ ದಾಳಿಗಳ ಕುರಿತು ಕೊಲಂಬಿಯಾ ಇತ್ತೀಚೆಗೆ ನೀಡಿದ ಹೇಳಿಕೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ನಿರಾಶೆ ವ್ಯಕ್ತಪಡಿಸಿದ್ದಾರೆ.

ಭಯೋತ್ಪಾದಕರನ್ನು ಕಳುಹಿಸುವವರು ಮತ್ತು ತಮ್ಮನ್ನು ತಾವು ರಕ್ಷಿಸಿಕೊಳ್ಳುವವರ ನಡುವೆ ಸಮಾನತೆಯಾಗಲು ಸಾಧ್ಯವಿಲ್ಲ ಎಂದಿರುವ ತರೂರ್, ಭಾರತೀಯ ದಾಳಿಯ ಅನಂತರ ಪಾಕಿಸ್ತಾನದಲ್ಲಿ ಆದ ಜೀವಹಾನಿಗೆ ಸಂತಾಪ ಸೂಚಿಸಿರುವ ಕೊಲಂಬಿಯಾ ಸರ್ಕಾರದ ಪ್ರತಿಕ್ರಿಯೆಯಿಂದ ನಾವು ಸ್ವಲ್ಪ ನಿರಾಶೆಗೊಂಡಿದ್ದೇವೆ. ಇದರ ಬದಲು ಭಯೋತ್ಪಾದನೆಗೆ ಬಲಿಯಾದವರ ಬಗ್ಗೆ ಸಹಾನುಭೂತಿ ತೋರಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.

ಭಯೋತ್ಪಾದನೆಯ ವಿರುದ್ಧ ಹೋರಾಡುವ ಭಾರತದ ಬಲವಾದ ಸಂಕಲ್ಪವನ್ನು ವಿಶ್ವಕ್ಕೆ ತಿಳಿಸಲು ಸರ್ಕಾರದ ಜಾಗತಿಕ ಸಂಪರ್ಕದ ಭಾಗವಾಗಿ ತರೂರ್ ಅವರನ್ನು ಒಳಗೊಂಡ ಸಂಸದರ ನಿಯೋಗವು ಕೊಲಂಬಿಯಾ ಪ್ರವಾಸದಲ್ಲಿದೆ.

ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಭಾರತೀಯ ಸೇನೆ ನಡೆಸಿದ ದಾಳಿಯ ಅನಂತರ ಪಾಕಿಸ್ತಾನದಲ್ಲಿ ಆಗಿರುವ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿರುವ ಕೊಲಂಬಿಯಾ ಸರ್ಕಾರದ ಪ್ರತಿಕ್ರಿಯೆಯಿಂದ ನಾವು ಸ್ವಲ್ಪ ನಿರಾಶೆಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ 6 ನಾಗರಿಕರನ್ನು ಹತ್ಯೆಯ ಹಿಂದೆ ಪಾಕಿಸ್ತಾನ ಪೋಷಿಸುತ್ತಿರುವ ಭಯೋತ್ಪಾದಕರ ಕೈವಾಡವಿದೆ ಎಂಬುದಕ್ಕೆ ದೃಢವಾದ ಪುರಾವೆಗಳಿವೆ. ನಾವು ನಮ್ಮ ಆತ್ಮರಕ್ಷಣೆಯ ಹಕ್ಕನ್ನು ಮಾತ್ರ ಚಲಾಯಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಕೊಲಂಬಿಯಾದೊಂದಿಗೆ ವಿವರವಾಗಿ ಮಾತನಾಡಲು ನಮಗೆ ತುಂಬಾ ಸಂತೋಷವಾಗಿದೆ. ಕೊಲಂಬಿಯಾ ಅನೇಕ ಭಯೋತ್ಪಾದಕ ದಾಳಿಗಳನ್ನು ಸಹಿಸಿಕೊಂಡಿರುವಂತೆಯೇ ಭಾರತದಲ್ಲೂ ಸಹ ನಾವು ಸಹಿಸಿಕೊಂಡಿದ್ದೇವೆ. ಸುಮಾರು ನಾಲ್ಕು ದಶಕಗಳಿಂದ ಬಹಳ ದೊಡ್ಡ ಸಂಖ್ಯೆಯ ದಾಳಿಗಳನ್ನು ನಾವು ಸಹಿಸಿಕೊಂಡಿದ್ದೇವೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!