ದಿಗಂತ ವರದಿ ಮಡಿಕೇರಿ:
ಅಯ್ಯೋಧ್ಯೆಯಲ್ಲಿದ್ದ ಬಾಬರಿ ಮಸೀದಿ ಧ್ವಂಸಗೊಂಡ ದಿನವಾದ ಡಿ.6 ನ್ನು ಹಿಂದೂ ಸಂಘಟನೆಗಳು ಶೌರ್ಯ ದಿನವನ್ನಾಗಿ ಆಚರಿಸುತ್ತಿದ್ದು, ಮಡಿಕೇರಿಯಲ್ಲಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.
ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣಾ ವೇದಿಕೆ ಹಾಗೂ ಬಜರಂಗದಳದ ಪ್ರಮುಖರು ನಗರದ ಪೇಟೆ ಶ್ರೀ ರಾಮಮಂದಿರದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಶ್ರೀ ರಾಮಮಂದಿರದ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ನಗರದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ.