ಪಾಕಿಸ್ತಾನ ಪ್ರಧಾನಿ ಹುದ್ದೆಗೆ ಶಹಬಾಜ್‌ ಷರೀಫ್‌ ನಾಮಪತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಪಾಕಿಸ್ತಾನದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಮೈತ್ರಿಕೂಟದ ಎಲ್ಲ ಪ್ರತಿಪಕ್ಷಗಳು ಪಿಎಂಎಲ್ (ಎನ್) ಅಧ್ಯಕ್ಷ ಶಹಬಾಜ್ ಷರೀಫ್ ಅವರನ್ನು ಪಾಕಿಸ್ತಾನದ ಪ್ರಧಾನಿಯಾಗಿ ನಾಮನಿರ್ದೇಶನ ಮಾಡಿದ್ದಾರೆ. ಪಾಕ್‌ ಪ್ರಧಾನಿ ಹುದ್ದೆಗೆ ಭಾನುವಾರ ನಾಮಪತ್ರ ಸಲ್ಲಿಸಿದ್ದಾರೆ. ಇತ್ತ ಇಮ್ರಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಕೂಡ ಮಾಜಿ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಅವರ ಹೆಸರನ್ನು ಪ್ರಧಾನಿ ಹುದ್ದೆಗೆ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಹೊಸ ಪ್ರಧಾನಿ ಆಯ್ಕೆ ಮಾಡಲು ಪಾಕಿಸ್ತಾನ ಅಸೆಂಬ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ವಿಶೇಷ ಸಭೆ ನಡೆಸಲಿದೆ. ಈ ಸಭೆಯು ನೂತನ ಪ್ರಧಾನಿಯ ಆಯ್ಕೆಯನ್ನು ಅಧಿಕೃತಗೊಳಿಸಲಿದೆ.
ಶಹಬಾಜ್ ಷರೀಫ್ ನೇತೃತ್ವದ ಹೊಸ ಸರ್ಕಾರದಲ್ಲಿ ಬಿಲಾವಲ್ ಭುಟ್ಟೊ ಅವರನ್ನು ವಿದೇಶಾಂಗ ಸಚಿವರನ್ನಾಗಿ ನೇಮಿಸುವ ಸಾಧ್ಯತೆಗಳು ಹೆಚ್ಚಿವೆ ಎಂಬ ಸುದ್ದಿ ಪಾಕಿಸ್ತಾನದ ರಾಜಕೀಯ ವಲಯದಲ್ಲಿ ಹರಿದಾಡ್ತಿದೆ. ಬಿಲಾವಲ್ ಭುಟ್ಟೋ ಅವರು ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಮತ್ತು ಪಾಕಿಸ್ತಾನದ ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರ ಪುತ್ರ. ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ಬಿಲಾವಲ್ ಭುಟ್ಟೊ ಅವರ ರಾಜಕೀಯ ಹಿನ್ನೆಲೆ ಮತ್ತು ಉನ್ನತ ಶಿಕ್ಷಣದ ಕಾರಣದಿಂದ ಹೊಸ ವಿದೇಶಾಂಗ ಸಚಿವರಾಗಿ ನೇಮಕವಾಗಲಿದ್ದಾರೆ ಎಂದು ವರದಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!