ಪಾಕಿಸ್ತಾನದ ಪ್ರಧಾನಿಯಾಗಿ ಶೆಹಬಾಜ್ ಶರೀಫ್ ಪ್ರಮಾಣವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದಲ್ಲಿ 2ನೇ ಬಾರಿ ಪ್ರಧಾನಿಯಾಗಿ ಶೆಹಬಾಜ್ ಶರೀಫ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ಪಾಕಿಸ್ತಾನದ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ 72 ವರ್ಷದ ಶೆಹಬಾಜ್ ಅವರಿಗೆ ರಾಷ್ಟ್ರಪತಿ ಆರೀಫ್ ಅಲ್ವಿ ಅವರು ಪ್ರಮಾಣವಚನ ಬೋಧಿಸಿದರು.

ಈ ಸಂದರ್ಭ ಪಿಎಂಎಲ್‌-ಎನ್ ಪಕ್ಷದ ಅಧ್ಯಕ್ಷ ನವಾಜ್ ಶರೀಫ್‌, ಪಂಜಾಬ್ ಮುಖ್ಯಮಂತ್ರಿ ಮರಿಯಮ್ ನವಾಜ್, ಸಿಂಧ್ ಮುಖ್ಯಮಂತ್ರಿ ಮುರಾದ್ ಅಲಿ ಶಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. ಮೂರೂ ಸೇನೆಯ ಮುಖ್ಯಸ್ಥರು, ರಾಜತಾಂತ್ರಿಕರು, ಮುಂಚೂಣಿಯ ಕೈಗಾರಿಕೋದ್ಯಮಿಗಳು, ನಾಗರಿಕ ಸಮಾಜದ ಪ್ರಮುಖರು ಮತ್ತು ಮಾಧ್ಯಮ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

2022ರಲ್ಲಿ ಪಾಕಿಸ್ತಾನದಲ್ಲಿದ್ದ ಸಮ್ಮಿಶ್ರ ಸರ್ಕಾರದಲ್ಲೂ ಶೆಹಬಾಜ್ ಅವರು ಪ್ರಧಾನಿಯಾಗಿದ್ದರು. ಆಗ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ವಿರುದ್ಧ ವಿಶ್ವಾಸಮತ ಯಾಚನೆಯಲ್ಲಿ ಗೆದ್ದಿದ್ದ ಶೆಹಬಾಜ್ ಪ್ರಧಾನಿ ಹುದ್ದೆಗೆ ಏರಿದ್ದರು. ಆದರೆ ಆ ಸಂದರ್ಭದಲ್ಲಿ ಅನಾರೋಗ್ಯದಿಂದಾಗಿ ಅಲ್ವಿ ಅವರು ಪ್ರಮಾಣವಚನ ಬೋಧಿಸಿರಲಿಲ್ಲ. ಹೀಗಾಗಿ ಸೆನೆಟ್ ಅಧ್ಯಕ್ಷ ಸಾದಿಕ್ ಸಂಜರಾನಿ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದರು.

ಈ ಬಾರಿ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದ ಕಾರಣ, ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ಹಾಗೂ ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಸೇರಿ ಸರ್ಕಾರ ರಚಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!