ಪಾಕಿಸ್ತಾನದ ಪ್ರಧಾನಿಯಾಗಿ ಶೆಹಬಾಜ್‌ ಷರೀಫ್‌ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಪ್ರಧಾನಿಯಾಗಿ (Pakistan PM) 2ನೇ ಅವಧಿಗೆ ಶೆಹಬಾಜ್‌ ಷರೀಫ್‌ (Shehbaz Sharif) ಆಯ್ಕೆಯಾಗಿದ್ದಾರೆ.

ಕಳೆದ ತಿಂಗಳು ನಡೆದ ವಿವಾದಾತ್ಮಕ ಚುನಾವಣೆಯ ನಂತರ ಪಾಕಿಸ್ತಾನದ ಶಾಸಕರು ಶೆಹಬಾಜ್ ಷರೀಫ್ ಅವರನ್ನು ಎರಡನೇ ಅವಧಿಗೆ ದೇಶದ ಪ್ರಧಾನಿಯಾಗಿ ಆಯ್ಕೆ ಮಾಡಿದ್ದಾರೆ.

ಭಾನುವಾರ ಸಂಸತ್ತಿನ ಕೆಳಮನೆ ಎಂದು ಕರೆಯಲ್ಪಡುವ ರಾಷ್ಟ್ರೀಯ ಅಸೆಂಬ್ಲಿಯು ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡಲು ಸಭೆ ಸೇರಿತು. ಈ ವೇಳೆ ಶೆಹಬಾಜ್‌ ಷರೀಫ್‌ ಅವರನ್ನು ಪ್ರಧಾನಿ ಹುದ್ದೆಗೆ ಆಯ್ಕೆ ಮಾಡಲಾಗಿದೆ.

ಶೆಹಬಾಜ್ ಷರೀಫ್ ಅವರು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ ಎಂದು ನ್ಯಾಷನಲ್ ಅಸೆಂಬ್ಲಿ ಸ್ಪೀಕರ್ ಅಯಾಜ್ ಸಾದಿಕ್ ಹೇಳಿದ್ದಾರೆ.

336 ಸದಸ್ಯ ಬಲದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಶೆಹಬಾಜ್ 201 ಮತಗಳನ್ನು ಪಡೆದರು. ಅವರ ಪ್ರತಿಸ್ಪರ್ಧಿ ಒಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಪಡೆದರು. ವಿಜೇತರಿಗೆ ಕನಿಷ್ಠ 169 ಮತಗಳು ಬೇಕಾಗಿದ್ದವು.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!