Monday, August 8, 2022

Latest Posts

ಕೊರೋನಾ ಲಸಿಕೆ ಪಡೆಯಲು ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಮನವಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸದಿಗಂತ ವರದಿ,ಚಿಕ್ಕಬಳ್ಳಾಪುರ:

18 ರಿಂದ 44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆಯನ್ನು ಪಡೆಯಲು ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗಧಿ ಮಾಡಿಕೊಂಡಿರುವವರಿಗೆ ಮಾತ್ರ ಇಂದಿನಿಂದ ಲಸಿಕೆ ನೀಡಲಾಗುವುದು ಈ ಹಿನ್ನಲೆಯಲ್ಲಿ ಜಿಲ್ಲೆಯ ಅರ್ಹ ವಯೋಮಾನದವರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಆರ್ ಲತಾ ಸಾರ್ವಜನಿಕರಲ್ಲಿ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
18 ರಿಂದ 44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆಯನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಇಂದಿನಿಂದಲೇ ನೀಡಲಾಗುತ್ತದೆ.ನೊಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ.18 ರಿಂದ 44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆಯನ್ನು ಹಾಕಲು ಕೋವಿನ್ ಪೋರ್ಟಲ್ ನಲ್ಲಿ ಪ್ರತ್ಯೇಕ ಲಸಿಕಾ ಸತ್ರಗಳನ್ನು ಮಾಡಲಾಗುತ್ತಿದೆ. ಹಾಗೂ ಪ್ರತಿ ಕೇಂದ್ರಕ್ಕೆ 150 ಫಲಾನುಭವಿಗಳಿಗೆ ಅವಕಾಶ ಕಲ್ಪಿಸಲಾಗಿರುತ್ತದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 605366 ಫಲಾನುಭವಿಗಳು 18 ರಿಂದ 44 ವರ್ಷ ವಯೋಮಾನದವರೆಂದು ರಾಜ್ಯದಿಂದ ಗುರಿ ನಿಗಧಿಪಡಿಸಿದೆ ಎಂದರು.
45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆಯನ್ನು ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಮತ್ತು ಪ್ರಾ.ಆ.ಕೇಂದ್ರಗಳಲ್ಲಿ ಎಂದಿನಂತೆ ನಡೆಸಲು ಸೂಚಿಸಲಾಗಿದೆ.
45 ವರ್ಷ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆಯನ್ನು ಮಾತ್ರ ನೀಡಲು ಅವಕಾಶ ನೀಡಲಾಗಿದ್ದು, ಅನಿವಾರ್ಯ ಸಮಯದಲ್ಲಿ ಶೇ.10 ರಷ್ಟು 1ನೇ ಡೋಸ್ ಲಸಿಕೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss