CINE | ‘ಕೆರಾಡಿ ಸ್ಟುಡಿಯೋಸ್’ ಮೂಲಕ ಹೊಸ ಪ್ರಯತ್ನಕ್ಕೆ ಸಜ್ಜಾದ ಶೆಟ್ರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಚಿತ್ರರಂಗದಲ್ಲಿ ವಿನೂತನ ಪ್ರಯತ್ನ ಮಾಡಿ ಗೆದ್ದ ರಿಷಬ್ ಶೆಟ್ಟಿ ಇದೀಗ ಹೊಸ ಉದ್ಯಮಕ್ಕೆ ಕಾಲಿಟ್ಟಿದ್ದಾರೆ.

‘ಕೆರಾಡಿ ಸ್ಟುಡಿಯೋಸ್’ ಎಂಬ ಮಾರ್ಕೆಟಿಂಗ್ ಸಂಸ್ಥೆಯನ್ನು ರಿಷಬ್ ಹುಟ್ಟುಹಾಕಿದ್ದು, ತನ್ನ ಹುಟ್ಟೂರು, ಬೆಳೆದ ಊರು, ನನ್ನ ಹೃದಯಕ್ಕೆ ಹತ್ತಿರವಾದ ಊರು ಎಲ್ಲಕ್ಕಿಂತ ಹೆಚ್ಚಾಗಿ ನನ್ನ ಸಿನಿಮಾ ಕನಸು ಆರಂಭವಾದ ಜಾಗ ಕೆರಾಡಿ ಹಾಗಾಗಿ ಮಾರ್ಕೆಟಿಂಗ್ ಫರ್ಮ್‌ಗೆ ಕೆರಾಡಿ ಸ್ಟುಡಿಯೋಸ್ ಎಂದು ಹೆಸರಿಟ್ಟಿದ್ದಾರೆ.

ಒಂದು ಸಿನಿಮಾದ ಗೆಲುವಿಗೆ ಅದರ ನಿರ್ಮಾಣದಷ್ಟೇ, ಪ್ರಚಾರದ ಅಗತ್ಯವೂ ಇದೆ. ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ ತಂಡ ಹೊಸ ಹೆಜ್ಜೆ ಇರಿಸುತ್ತಿದೆ. ‘ಕೆರಾಡಿ ಸ್ಟುಡಿಯೋಸ್’ ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!