May 2, 2026
Saturday, May 2, 2026
spot_img

ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ ಶೆಟ್ರು: ಯಾಕಂತೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ರಾಜಕೀಯ ಹಾಗೂ ಸಿನಿ ವಲಯದಲ್ಲಿ ಕುತೂಹಲ ಮೂಡಿಸಿದೆ. ಇಬ್ಬರೂ ಆತ್ಮೀಯವಾಗಿ ಮಾತುಕತೆ ನಡೆಸಿದ ಕ್ಷಣಗಳ ಫೋಟೋಗಳನ್ನು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಭೇಟಿಯ ಕುರಿತು ಪ್ರತಿಕ್ರಿಯಿಸಿದ ರಿಷಬ್, ಅಮಿತ್ ಶಾ ಅವರು ‘ಕಾಂತಾರ’ ಹಾಗೂ ‘ಕಾಂತಾರ ಅಧ್ಯಾಯ 1’ ಸಿನಿಮಾಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮ್ಮ ಮುಂದಿನ ಚಿತ್ರಗಳ ಕುರಿತೂ ಆಸಕ್ತಿಯಿಂದ ವಿಚಾರಿಸಿದರು ಎಂದು ತಿಳಿಸಿದ್ದಾರೆ. ಭಾರತೀಯ ಇತಿಹಾಸ, ಸಂಸ್ಕೃತಿ ಮತ್ತು ಚಲನಚಿತ್ರಗಳ ಬಗ್ಗೆ ಅಮಿತ್ ಶಾ ಅವರಿಗೆ ಇರುವ ಆಳವಾದ ತಿಳುವಳಿಕೆ ತಮ್ಮ ಮೇಲೆ ವಿಶೇಷ ಪ್ರಭಾವ ಬೀರಿದೆ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ:

ಇದಕ್ಕೂ ಮುನ್ನ ರಿಷಬ್ ಶೆಟ್ಟಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಭೇಟಿ ಮಾಡಿ ಕನ್ನಡ ಚಿತ್ರರಂಗದ ಬೆಳವಣಿಗೆ ಕುರಿತು ಚರ್ಚಿಸಿದ್ದರು. ಆ ಭೇಟಿಯೂ ಸಾಕಷ್ಟು ಗಮನ ಸೆಳೆದಿತ್ತು.

ಸಿನಿಮಾ ಕ್ಷೇತ್ರದಲ್ಲಿ ಯಶಸ್ಸಿನ ಶಿಖರ ಏರಿರುವ ರಿಷಬ್, ಹಲವು ರಾಜಕೀಯ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದು ಚರ್ಚೆಗೆ ಗ್ರಾಸವಾಗಿದೆ. ಮುಂದಿನ ದಿನಗಳಲ್ಲಿ ಅವರು ರಾಜಕೀಯ ಪ್ರವೇಶ ಮಾಡುತ್ತಾರೆಯೇ ಎಂಬ ಪ್ರಶ್ನೆಯೂ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !