ರಾತ್ರಿಯಿಡೀ ‘ಕೈ’ ಮುಖಂಡರ ಜತೆ ಶೆಟ್ಟರ್ ಸುದೀರ್ಘ ಚರ್ಚೆ, ಕಾಂಗ್ರೆಸ್ ಸೇರ್ಪಡೆ ಗ್ಯಾರೆಂಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಂತೆ ಬಿಜೆಪಿಯಲ್ಲಿ ಸಾಕಷ್ಟು ಮಹತ್ವದ ಬೆಳವಣಿಗೆಗಳು ಆಗುತ್ತಿವೆ.
ಟಿಕೆಟ್ ಕೈ ತಪ್ಪುತ್ತಿದ್ದಂತೆಯೇ ಹಲವು ಪ್ರಭಾವಿ ನಾಯಕರು ಬಿಜೆಪಿ ಬಿಟ್ಟು ಕಾಂಗ್ರೆಸ್ ಕೈ ಹಿಡಿಯುತ್ತಿದ್ದಾರೆ.
ಇದೇ ಸಾಲಿಗೆ ಇದೀಗ ಬಿಜೆಪಿ ಹಿರಿಯ, ಪ್ರಭಾವಿ ನಾಯಕ ಜಗದೀಶ್ ಶೆಟ್ಟರ್ ಕೂಡ ಕಾಂಗ್ರೆಸ್ ಸೇರೋದು ಬಹುತೇಕ ಖಚಿತವಾಗಿದೆ.

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಏಳನೇ ಬಾರಿ ಸ್ಪರ್ಧೆಗೆ ಟಿಕೆಟ್ ನೀಡದ ಕಾರಣ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರ ಜತೆ ರಾತ್ರಿಯಿಡೀ ಸುದೀರ್ಘ ಚರ್ಚೆ ನಂತರ ಕೈ ಹಿಡಿಯಲು ಮಹೂರ್ತ ಫಿಕ್ಸ್ ಆಗಿದೆ ಎನ್ನಲಾಗಿದೆ.

ನಿರೀಕ್ಷೆಯಂತೆ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದಂತೆಯೇ ಕಾಂಗ್ರೆಸ್ ನಾಯಕರು ಅಲರ್ಟ್ ಆಗಿದ್ದು, ಪ್ರಭಾವಿ ನಾಯಕ ಶಾಮನೂರು ಶಿವಶಂಕರಪ್ಪ ಅವರನ್ನು ಶೆಟ್ಟರ್ ಜತೆ ಮಾತುಕತೆಗೆ ಕಳುಹಿಸಲಾಗಿತ್ತು.

ಬೆಂಗಳೂರಿನ ರಿಚ್‌ಮಂಡ್ ಟೌನ್‌ನಲ್ಲಿ ಇರುವ ಶಾಮನೂರು ಮನೆಯಲ್ಲಿ ರಾತ್ರಿಯಿಡೀ ಸುಧೀರ್ಘ ಚರ್ಚೆ ನಡೆದಿದೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಜತೆ ಸಭೆ ನಡೆದಿದೆ.

ಐದು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಂತರ ಇಂದು ಕೆಪಿಸಿಸಿ ಕಚೇರಿಯಲ್ಲಿ ಶೆಟ್ಟರ್ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರ ಕೈ ನಾಯಕರು ಶೆಟ್ಟರ್‌ರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!