ಬಿಜೆಪಿಗೆ ಗುಡ್ ಬೈ ಹೇಳಿದ ಶೆಟ್ಟರ್ ಬೆಂಬಲಿಗರು

ಹೊಸದಿಗಂತ ವರದಿ ಹುಬ್ಬಳ್ಳಿ:

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ರಾಜೀನಾಮೆ ಸಲ್ಲಿಸಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರಿದ ಬೆನ್ನಲ್ಲೇ ಅವರ ಬೆಂಬಲಿಗರಾದ ಮಾಜಿ ಶಾಸಕ ಎಸ್.ಐ ಚಿಕ್ಕನಗೌಡ ಹಾಗೂ ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರಗಿ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು.

ಕುಂದಗೋಳ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಾಗಿದ್ದ ಐಸ್.ಐ. ಚಿಕ್ಕನಗೌಡರ ಬಿಟ್ಟು ಎಸ್.ಆರ್. ಪಾಟೀಲ ಅವರಿಗೆ ಟಿಕೆಟ್ ನೀಡಿದ್ದರಿಂದ ಈ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ಈಗಾಗಲೇ ಚಿಕ್ಕನಗೌಡರ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಇನ್ನೂ ನಾಗೇಶ ಕಲಬುರಗಿ ಜಗದೀಶ ಶೆಟ್ಟರ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಆದರಿಂದ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!