ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆ ತಂದೆಯೇ ಅತ್ಯಾಚಾರವೆಸಗಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರದಲ್ಲಿ ನಡೆದಿದೆ.
ತಂದೆ ತನ್ನ 13 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಬಾಲಕಿಯ ತಾಯಿ ತಿಪಟೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಪ್ರಕರಣವನ್ನು ದಾಖಲು ಮಾಡಲಾಗಿದೆ.
ಈ ಹಿಂದೆಯೂ ತಂದೆ ತನ್ನ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.