ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿಕೊಲೆ ಪ್ರಕರಣದಲ್ಲಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನಗೆ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಇದರಿಂದಾಗಿ ಸಾಮಾನ್ಯರು ಸೆಲೆಬ್ರಿಟಿಗಳಿಗೆ ನಮ್ಮ ನಾಡಿನಲ್ಲಿ ಸ್ಪೆಷಲ್ ಟ್ರೀಟ್‌ಮೆಂಟ್ ಎಂದು ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.
ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಜಿ&ಐಜಿಪಿ ಅಲೋಕ್ ಮೋಹನ್ ಅವರಿಂದ ಮಾಹಿತಿ ಪಡೆದು ಖಡಕ್ ಸೂಚನೆ ನೀಡಿದರು. ಕೂಡಲೆ ದರ್ಶನ ಮತ್ತು ಇತರರನ್ನು ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ.
ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.